This is the title of the web page
This is the title of the web page

Live Stream

April 2023
T F S S M T W
 12345
6789101112
13141516171819
20212223242526
27282930  

| Latest Version 8.0.1 |

State News

ಪಿಂಚಣಿಗಾಗಿ ಇನ್ನೇಷ್ಟು ಹೆಣ ಬೀಳಬೇಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ರಾಜ್ಯ ಸರ್ಕಾರದ ವಿರುದ್ದ ಕಿಡಿ – ಪಿಂಚಣಿಗಾಗಿ ಹೋರಾಟ ನಡೆಯುತ್ತಿದ್ದರೂ ಕಣ್ತೇರೆದು ನೋಡದ ರಾಜ್ಯ ಸರ್ಕಾರದ ವಿರುದ್ದ ಅಸಮಾಧಾನ


ಬೆಂಗಳೂರು

ಹೌದು ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಕಳೆದ 141 ದಿನಗಳಿಂದ ನಿರಂತರವಾಗಿ ಹೋರಾಟ ನಡೆ ಯುತ್ತಿದ್ದರೂ ಕೂಡಾ ಕಣ್ತೇರೆದು ನೋಡದ ರಾಜ್ಯ ಸರ್ಕಾರ ವಿರುದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.ಈ ಒಂದು ವಿಚಾರ ಕುರಿತಂತೆ ಟ್ವೀಟ್ ಮಾಡಿರುವ ಅವರು ಇನ್ನೇಷ್ಟು ಹೆಣ ಬೀಳಬೇಕು ಎನ್ನುತ್ತಾ ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕ ರಿಂದ ಪಿಂಚಣಿಗಾಗಿ 141 ದಿನಗಳಿಂದ ಅನಿರ್ದಿ ಷ್ಟಾವಧಿ ಪ್ರತಿಭಟನೆಗೆ ನಡೆಸುತ್ತಿದ್ದು ಶಿಕ್ಷಕರಾದ ಶಂಕರಪ್ಪ ಬೋರಡ್ಡಿ ಎಂಬುವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟಾ ದರೂ ಕೂಡಾ ರಾಜ್ಯ ಸರ್ಕಾರ ಈ ಕುರಿತಂತೆ ಸ್ಪಂದಿಸುತ್ತಿಲ್ಲ ಹೀಗಾಗಿ ವಿರೋಧ ಪಕ್ಷದ ನಾಯ ಕರಾದ ಸಿದ್ದರಾಮಯ್ಯ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ.ಶಿಕ್ಷಕರು ಕೇಳುತ್ತಿ ರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ಬಿಜೆಪಿ ಸರ್ಕಾರಕ್ಕೆ ಬೇಡವೇ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿ ಸಿದ್ದಾರೆ.ಇನ್ನೂ ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾ ಗಿದ್ದಾರೆ.

ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಬಸವರಾಜ ಬೊಮ್ಮಾಯಿ ಅವರೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲ ಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಇಷ್ಟು ದಿನ ಕೋಮಾದ ಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಿದೆ.ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡು ವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಬಸವರಾಜ ಬೊಮ್ಮಾಯಿ ಅವರಿಗೆ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆ ಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ಬಿಜೆಪಿ ಸರ್ಕಾರಕ್ಕೆ ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು ಅಮೂಲ್ಯ ಅನ್ನಿಸುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ

ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ಬಿಜೆಪಿ ಸರ್ಕಾರ ಮಾತುಕತೆ ನಡೆಸಿ ಅವರ ಬೇಡಿಕೆಗಳನ್ನು ತಕ್ಷಣ ಈಡೇರಿ ಸುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News Join The Telegram Join The WhatsApp

 

 

Suddi Sante Desk

Leave a Reply