ಬೆಂಗಳೂರು –
ಬೆಂಗಳೂರಿನ ನಗರದಲ್ಲಿನ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಾಗಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಗೆ 87 ದಿನಗಳ ಬಳಿಕ ಹೈಕೋರ್ಟ್ ನಿಂದ ಜಾಮೀನು ಸಿಕ್ಕಿದೆ.

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದರು ಮಾಜಿ ಮೇಯರ್ ಸಂಪತ್ ರಾಜ್ . ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದಂತೆ ಹೈಕೋರ್ಟ್ ನ ಏಕ ಸದಸ್ಯ ಪೀಠವು, ಮಾಜಿ ಮೇಯರ್ ಸಂಪತ್ ರಾಜ್ ಗೆ ಜಾಮೀನು ನೀಡಿದೆ.

ಹೀಗಾಗಿ 87 ದಿನಗಳ ಬಳಿಕ, ಮಾಜಿ ಮೇಯರ್ ಸಂಪತ್ ರಾಜ್ ಗೆ ಜಾಮೀನು ಸಿಕ್ಕಂತೆ ಆಗಿದೆ.