ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮಹಾಪೌರ ಭಾರತೀಯ ಜನತಾ ಪಕ್ಷದ ಮುಖಂಡರಾಗಿದ್ದ ಸುಧೀರ ಸರಾಫ ನಿಧನರಾಗಿ ದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯ ದಿಂದ ಬಳಲುತ್ತಿದ್ದ ಇವರು ಹುಬ್ಬಳ್ಳಿಯಲ್ಲಿ ನಿಧನರಾಗಿದ್ದಾರೆ.

54 ವಯಸ್ಸಿನ ಇವರು ಕಳೆದ ಹಲವಾರು ದಿನ ಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಪಕ್ಷದ ಸಂಘಟನೆ ಪಕ್ಷದ ಹಲವು ಕಾರ್ಯಕ್ರಮಗಳಲ್ಲಿ ಸದಾ ಯಾವಾಗಲೂ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.ಒಮ್ಮೆ ಮೇಯರ್ ಆಗಿ ಸಾಕಷ್ಟು ಪ್ರಮಾಣದಲ್ಲಿ ಕೆಲಸ ಕಾರ್ಯಗಳನ್ನು ಮಾಡಿದ್ದರು ಪಕ್ಷದ ಆಕ್ವಿವ್ ಲೀಡರ್ ಇಂದು ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬೃಹತ್ ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ತೀವ್ರವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಇದರೊಂದಿಗೆ ಜಿಲ್ಲೆಯ ಇನ್ನೂಳಿದ ಬಿಜೆಪಿ ಶಾಸಕರಾದ ಅಮೃತ ದೇಸಾಯಿ,ಅರವಿಂದ ಬೆಲ್ಲದ,ಶಂಕರ ಪಾಟೀಲ ಮುನೇನಕೊಪ್ಪ, ಸೇರಿ ಹಲವು ನಾಯಕರು ಮುಖಂಡರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯು ಅವರ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ಬರಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಮೃತರ ಪಾರ್ಥಿವ ಶರೀರದ ಅಂತಿಮ ಯಾತ್ರೆಯು ದಿನಾಂಕ 25/03/2021ರ ಗುರುವಾರ ಬೆಳಗ್ಗೆ 9.30 ಗಂಟೆಗೆ ಅವರ ಸ್ವಗ್ರಹದಿಂದ ಹೊರಟು ಕೇಶ್ವಾಪುರ ಮುಕ್ತಿ ಧಾಮದಲ್ಲಿ ನೇರವೇರುವುದು