ಕಲಘಟಗಿ –
ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯವ್ಯಾಪಿ ಕೆಪಿಸಿಸಿ ಘಟಕ ಕರೆ ನೀಡಿರುವ 100 ನಾಟ್ ಔಟ್ ಎಂಬ ಹೆಸರಿನ ಪ್ರತಿಭಟನೆಗೆ ಧಾರವಾಡ ಜಿಲ್ಲೆಯಲ್ಲೂ ಬೆಂಬಲ ಕಂಡು ಬಂದಿದೆ. ಹೌದು ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಕರೆ ನೀಡಿರುವ ಈ ಒಂದು ಹೋರಾ ಟಕ್ಕೆ ಜಿಲ್ಲೆಯ ಕಲಘಟಗಿಯಲ್ಲೂ ಬೆಂಬಲ ಕಂಡು ಬಂದಿದೆ

ಹೌದು ಕಲಘಟಗಿಯಲ್ಲಿ ಮಾಜಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಸಂತೋಷ ಲಾಡ್ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ಮಾಡಲಾಯಿತು.ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು

ಇಪ್ಪತ್ತಕ್ಕೂ ಹೆಚ್ಚು ಕಾರ್ಯಕರ್ತರು ಮುಖಂಡರ ನೇತೃತ್ವದಲ್ಲಿ ಕಲಘಟಗಿ ಬ್ಲಾಕ್ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಈ ಒಂದು ಹೋರಾಟ ನಡೆಯಿತು

ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆ ಆಗುತ್ತಿದೆ ಇದರಿಂದಾಗಿ ಸಾರ್ವಜನಿಕರು ತತ್ತರಿಸಿದ್ದು ಹೀಗಾಗಿ ತೊಂದರೆ ಆಗಿದ್ದು ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಒತ್ತಾಯವನ್ನು ಮಾಜಿ ಸಚಿವ ಸಂತೋಷ ಲಾಡ್ ಮಾಡಿದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು