ಧಾರವಾಡ –
ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಲಿದೆ.ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯವಾದ ಹಿನ್ನಲೆಯಲ್ಲಿ ಇಂದು ಧಾರವಾಡದಲ್ಲಿ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ವಿಚಾರಣೆ ನಡೆಯಲಿದೆ.
ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈಗಾಗಲೇ ಬಂಧನವಾಗಿರುವ ಇವರು ಸಧ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಇಂದು ನ್ಯಾಯಾಂಗ ಬಂಧನದ ಅರ್ಜಿ ವಿಚಾರಣೆ ನಡೆಯಲಿದ್ದು ವಿನಯ ಕುಲಕರ್ಣಿ ಅವರನ್ನು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವ ಸಾಧ್ಯತೆ ಇದೆ.
ಇಲ್ಲಿಂದಲೇ ನ್ಯಾಯಾವಾದಿಗಳು ವಿಡಿಯೋ ಕಾನ್ಪರನ್ಸ್ ಮೂಲಕ ವಿಚಾರಣೆ ಮಾಡಲಿದ್ದಾರೆ. ಇನ್ನೂ ಇತ್ತ ಜಾಮೀನಿಗಾಗಿ ಹೈಕೋರ್ಟ್ ಗೆ ಜಾಮೀನು ಅರ್ಜಿಯನ್ನು ವಿನಯ ಕಲಕರ್ಣಿ ಅವರು ಸಲ್ಲಿಸಿದ್ದು ಹೈಕೋರ್ಟ್‌ನಲ್ಲಿ ಈ ಒಂದು ಅರ್ಜಿ ಇನ್ನೂ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಇಂದು ಪುನಃ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ವಿಸ್ತರಣೆ ಮಾಡುವ ಸಾಧ್ಯತೆ ಇದೆ.
ಇದರೊಂದಿಗೆ ಇದೇ ಪ್ರಕರಣದಲ್ಲಿ ಅಕ್ರಮ ಶಸ್ರಾಸ್ತ್ರ ಪೊರೈಕೆ ಆರೋಪದ ಮೇಲೆ ಬಂಧನವಾಗಿ ನ್ಯಾಯಾಂಗ ಬಂಧನದಲ್ಲಿರುವ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನವು ಇವತ್ತೇ ಮುಕ್ತಾಯವಾಗಿಲಿದ್ದು ಇದನ್ನು ನ್ಯಾಯಾಲಯ ವಿಚಾರಣೆ ಮಾಡಲಿದೆ.