This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಚುನಾವಣಾ ಕಾರ್ಯದಿಂದ ಶಿಕ್ಷಕರಿಗೆ ವಿನಾಯಿತಿ – ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ಬಂತು ಚುನಾವಣಾಧಿಕಾರಿಗಳಿಗೆ ಮಹತ್ವದ ಸೂಚನೆ…..

WhatsApp Group Join Now
Telegram Group Join Now

ಬೆಂಗಳೂರು

ಚುನಾವಣಾ ಕಾರ್ಯದಿಂದ ಶಿಕ್ಷಕರಿಗೆ ವಿನಾಯಿತಿ  ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ಬಂತು ಚುನಾವಣಾಧಿಕಾ  ರಿಗಳಿಗೆ ಮಹತ್ವದ ಸೂಚನೆ ಹೌದು

ಹೌದು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ಮೌಲ್ಯಮಾಪನದ ಶಿಕ್ಷಕರಿಗೆ ಚುನಾವಣಾ ಕಾರ್ಯದಿಂದ ವಿನಾಯಿತಿಗೆ ಸೂಚನೆಯನ್ನು ನೀಡಲಾಗಿದೆ.ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಮೌಲ್ಯಮಾ ಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಪ್ರಾಂಶುಪಾಲರು,ಉಪನ್ಯಾಸಕರು ಮತ್ತು ಶಿಕ್ಷಕರಿಗೆ ಲೋಕಸಭೆ ಚುನಾವಣೆ ಕಾರ್ಯದಿಂದ ವಿನಾಯಿತಿ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್ ಸಿಂಗ್ ಅವರು ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರು ಮತ್ತು ಶಿಕ್ಷಕರನ್ನು ಚುನಾವಣೆ ಕಾರ್ಯಗಳಿಗೆ ನಿಯೋಜನೆ ಮಾಡಿಕೊಳ್ಳಲಾ ಗುತ್ತಿದೆ ಆದರೆ,

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತಲಾ 3 ಪರೀಕ್ಷೆಗಳನ್ನು ನಡೆಸಬೇಕಾ ಗಿದೆ.ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು ಅಂತಿಮ ಹಂತದಲ್ಲಿವೆ.ಇದರ ಹಿಂದೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾ ಗಲಿವೆ.ನಂತರ ಉತ್ತರ ಪತ್ರಿಕೆಗಳ ಮೌಲ್ಯಮಾ ಪನ ಕಾರ್ಯವನ್ನು ತ್ವರಿತವಾಗಿ ಅಂತಿಮಗೊಳಿಸಿ ಫಲಿತಾಂಶ ಪ್ರಕಟಿಸಬೇಕಾಗಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಯನ್ನು ಮೌಲ್ಯಮಾಪನ ಕಾರ್ಯ ಮುಗಿಯುವವರೆಗೂ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡಿ ನಂತರ ಚುನಾವಣಾ ಕಾರ್ಯಕ್ಕೆ ನಿಯೋಜಿಸಿ ಕೊಳ್ಳುವಂತೆ ಸೂಚಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk