ಶಿವಮೊಗ್ಗ –
ಪರೀಕ್ಷೆಗೂ ಮುನ್ನವೇ FDA ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇದುವರೆಗೂ 34 ಆರೋಪಿಗಳನ್ನು ಬಂಧಿಸಿದ್ದು, ಲಕ್ಷಾಂತರ ಹಣ ಜಪ್ತಿ ಮಾಡಿದ್ದಾರೆ.

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ(FDA) ಹುದ್ದೆಗಳ ನೇಮಕಾತಿಗೆ ಇಂದು ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಶನಿವಾರವೇ ಸೋರಿಕೆ ಆಗಿದ್ದು, ಪರೀಕ್ಷೆಯನ್ನು ಈಗಾಗಲೇ ಮುಂದೂಡಿದೆ. ಸಿಸಿಬಿ ಕಾರ್ಯಾಚರಣೆ ಮಿಂಚಿನಂತೆ ಸಾಗಿದೆ.

ಇನ್ನೂ ಈ ಕುರಿತು CM Bsy ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಪರೀಕ್ಷೆಗೂ ಮುನ್ನವೇ ಪ್ರಶ್ನೆಪತ್ರಿಕೆ ಔಟ್ ಆಗಿರುವುದು ಅಕ್ಷಮ್ಯ ಅಪರಾಧ. ರಾತ್ರಿಯೇ ಮಾಹಿತಿ ಪಡೆದಿದ್ದೇನೆ. ತಪ್ಪಿತಸ್ಥ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ಸೂಚಿಸಿದ್ದೇನೆ. ಅಗತ್ಯ ಬಿದ್ದರೆ ಹುದ್ದೆಯಿಂದಲೇ ವಜಾಗೊಳಿಸಲು ಸೂಚಿಸಲಾಗಿದೆ ಎಂದರು.