ಬೆಂಗಳೂರು
ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೆ ಒಳಗಾಗಿರುವಂತ ಎಫ್ ಡಿಎ ಕೆ ಎಸ್ ಪ್ರಸಾದ್ ನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು 2012-13 ಮತ್ತು 2014-15ನೇ ಸಾಲಿನ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ಅಕ್ರಮ ನೇಮಕಾತಿಯ ಆರೋಪದ ಮೇರೆಗೆ ಬೆಂಗಳೂರು ವಿಭಾಗದ ಸಹ ನಿರ್ದೇಶಕರ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಕೆ ಎಸ್ ಪ್ರಸಾದ್ ಅವರನ್ನು ದಿನಾಂಕ 06-09-2022 ರಂದು ಸಿಐಡಿ ಬಂಧಿಸಿದ್ದರು
ಇನ್ನೂ ಸಿಐಡಿಯಿಂದ ಬಂಧಿಸಲ್ಪಟ್ಟಿರುವಂತ ಎಫ್ ಡಿಎ ಕೆ ಎಸ್ ಪ್ರಸಾದ್ ಅವರನ್ನು ಸೇವೆಯಿಂದ ಅಮಾನತ್ತು ಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.