ಬೆಂಗಳೂರು –
ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮುಖ್ಯಮಂತ್ರಿ ಆಪ್ತ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ ಮೇಲೆ ದೂರು ದಾಖಲಾಗಿದೆ.ನಿನ್ನೇಯಷ್ಟೇ ಎನ್ ಆರ್ ಸಂತೋಷ ತಮ್ಮ ಮನೆಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸಧ್ಯ ಅವರು ಎಮ್ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಇವೆಲ್ಲದರ ನಡುವೆ ಇತ್ತ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಎನ್ ಆರ್ ಸಂತೋಷ ಮೇಲೆ FIR ದಾಖಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವುದು ಕಾನೂನುಬಾಹಿರವಾಗಿರುವ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎನ್.ಆರ್. ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತೋಷ್ ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವಂತೆಯೂ ಸೂಚಿಸಲಾಗಿತ್ತು ಎನ್ನಲಾಗಿದ್ದು ಇವೆಲ್ಲದರ ನಡುವೆ ಈಗ ಮತ್ತೊಂದು ಬೆಳವಣಿಗೆಯಾಗಿದ್ದು ಅತ್ತ ಆಸ್ಪತ್ರೆಯಲ್ಲಿ ಸಂತೋಷ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರೆ ಇತ್ತ ಸದಾಶಿವನಗರ ಪೊಲೀಸರು ದೂರು ದಾಖಲು ಮಾಡಿಕೊಂಡಿದ್ದಾರೆ.