ಬೆಂಗಳೂರು –
ರಾಸಲೀಲೆ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ. ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಯುವತಿಗೆ ವಂಚಿಸಿದ್ದಾರೆ ಎಂದು ಆರೋಪಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯ ಪ್ರಕಾಶ್ ಎಂಬುವರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಸಂತ್ರಸ್ತ ಯುವತಿಗೆ ನ್ಯಾಯ ಕೊಡಿಸಬೇಕು ಹಾಗೂ ಯುವತಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.ಯುವತಿ ಮುಕ್ತವಾಗಿ ಬಂದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಹೇಳಿಕೆ ದಾಖಲಿಸಲು ಅವಕಾಶ ನೀಡಬೇಕು ಎಂದು ಪ್ರಕಾಶ್ ಆಗ್ರಹಿಸಿದ್ದಾರೆ.