ಕೊನೆಗೂ ಏರಿಕೆಯಾಯ್ತು ನಂದಿನಿ ಹಾಲು ಮೊಸರಿನ ದರ – ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ

Suddi Sante Desk
ಕೊನೆಗೂ ಏರಿಕೆಯಾಯ್ತು ನಂದಿನಿ ಹಾಲು ಮೊಸರಿನ ದರ – ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ

ಬೆಂಗಳೂರು

ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಬ್ರೇಕ್ ಹಾಕಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಯ ನಂತರ ಈಗ ದರವನ್ನು ಹೆಚ್ಚಳ ಮಾಡ ಲಾಗಿದೆ.ಹೌದು ನಂದಿನಿ ಹಾಲು,ಮೊಸರಿನ ದರ ವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳವನ್ನು ಮಾಡಿ ನಾಳೆಯಿಂದಲೇ ನೂತನ ದರವನ್ನು ಜಾರಿಗೆ ಮಾಡಿ ಆದೇಶವನ್ನು ಮಾಡಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುತ್ತಿರೋದಾಗಿ ಕೆ ಎಂಎಫ್ ನಿಂದ ಘೋಷಣೆ ಮಾಡಲಾಗಿತ್ತು. ಆದ್ರೇ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬ್ರೇಕ್ ಹಾಕಿ ದ್ದರು. ಈ ಬಳಿಕ ಸಭೆ ನಡೆಸಿ ಯಾವುದೇ ತೊಂದ ರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಯನ್ನು ನೀಡಿದ್ದರು.ಇದರ ಬೆನ್ನಲ್ಲೇ ಈಗ ನಂದಿನ ಹಾಲು,ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ.

ಚಕ್ರವರ್ತಿ ಸುದ್ದಿ ಸಂತೆ ನ್ಯೂಸ್…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.