ಬೆಂಗಳೂರು –
ಹೌದು ಕಳೆದ ಹಲವಾರು ವರ್ಷಗಳಿಂದ ರಾಜ್ಯದ ಶಿಕ್ಷಕರು ನಿರೀಕ್ಷೆ ಮಾಡುತ್ತಿದ್ದ ಬೇಡಿಕೆ ಯೊಂದನ್ನು ಈಡೇರಿಸಲು ಮುಂದಾಗಿದೆ ಹೌದು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಮಂಜೂರಾದ ಮುಖ್ಯ ಶಿಕ್ಷಕ ಹುದ್ದೆಗಳಲ್ಲಿ ಪ್ರಭಾರವಾಗಿ ಕಾರ್ಯನಿರ್ವ ಹಿಸುತ್ತಿರುವ ಸಹ ಶಿಕ್ಷಕರಿಗೆ ಪ್ರಭಾರ ಭತ್ಯೆ ನೀಡಲು ಒಪ್ಪಿಗೆ ನೀಡುವಂತೆ ಆರ್ಥಿಕ ಇಲಾಖೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಸ್ತಾವನೆ ಸಲ್ಲಿಸಲು ಚಿಂತನೆ ನಡೆಸಿದೆ.
ಮುಖ್ಯ ಶಿಕ್ಷಕರ ಕೆಲಸ ಕಾರ್ಯಗಳನ್ನು ಹೆಚ್ಚುವರಿಯಾಗಿ ನಿರ್ವಹಿಸಬೇಕಿರುವ ಕಾರಣ ಸಹ ಶಿಕ್ಷಕರಿಗೆ ಪ್ರಭಾರ ಭತ್ಯೆ ನೀಡಬೇಕೆಂಬ ಬೇಡಿಕೆ ಕೇಳಿಬಂದಿದ್ದು ಹೀಗಾಗಿ ಶಿಕ್ಷಕರ ಬೇಡಿಕೆ ಈಡೇರುವ ಸಾಧ್ಯತೆ ಇದೆ.
ಪ್ರಭಾರ ಜವಾಬ್ದಾರಿ ನಿರ್ವಹಿಸುತ್ತಿರುವ ಸಹ ಶಿಕ್ಷಕರಿಗೆ ಪ್ರಭಾರ ಭತ್ಯೆ ನೀಡಲು ಶಿಕ್ಷಕರ ಸಂಘ ಮಾಡಿದ ಮನವಿಯನ್ನು ಸಚಿವ ಬಿ.ಸಿ. ನಾಗೇಶ್ ಗಂಭೀರವಾಗಿ ಪರಿಗಣಿಸಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸರ್ಕಾರವು 3396 ಹಿರಿಯ ಮುಖ್ಯ ಶಿಕ್ಷಕರು 13,096 ಮುಖ್ಯ ಶಿಕ್ಷಕರ ಹುದ್ದೆಗಳನ್ನು ಕಳೆದ ಆಗಸ್ಟ್ ನಲ್ಲಿ ಮಂಜೂರು ಮಾಡಿದ್ದು ಇವುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯಾ ಶಾಲೆಯ ಸಹ ಶಿಕ್ಷಕರನ್ನು ಪ್ರಭಾರ ಮುಖ್ಯ ಶಿಕ್ಷಕರಾಗಿ ನೇಮಿಸ ಲಾಗಿದೆ ಅಂತಹ ಶಿಕ್ಷಕರು ತಮ್ಮ ಜವಾಬ್ದಾರಿ ಜೊತೆಗೆ ಮುಖ್ಯ ಶಿಕ್ಷಕರ ಕೆಲಸ ಕಾರ್ಯಗಳನ್ನು ಹೆಚ್ಚುವರಿಯಾಗಿ ನಿರ್ವಹಿಸಬೇಕಿರುವ ಕಾರಣ ಪ್ರಭಾರ ಭತ್ಯೆ ನೀಡಬೇಕೆಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೇಡಿಕೆ ಇಟ್ಟಿದ್ದು ಇದಕ್ಕೆ ಕ್ರಮ ಕೈಗೊಳ್ಳಲು ಇಲಾಖೆ ಚಿಂತನೆ ನಡೆಸಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ
ಸುದ್ದಿ ಸಂತೆ ನ್ಯೂಸ್…..