ಚಿತ್ರದುರ್ಗ –
KSRTC ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವಿಗೀಡಾದ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ.

ಕ್ರೂಸ್ ನಲ್ಲಿದ್ದ ಐವರು ಸ್ಥಳದಲ್ಲೇ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.ಮೂವರ ಸ್ಥಿತಿ ಚಿಂತಾಜನಕವಾಗಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಕ್ರೂಸರ್ ಕಾರಿನಲ್ಲಿದ್ದ ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಬಿಜಿ ಕೆರೆ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.

ಬೆಳಗಿನ ಜಾವ ಜವರಾಯನ ಅಟ್ಟಹಾಸ ಕಂಡು ಬಂದಿದೆ. KSRTC ಚಾಲಕನ ನಿರ್ಲಕ್ಷಕ್ಕೆ ಈ ಒಂದು ಅಪಘಾತವಾಗಿದೆ.ಇನ್ನೂ ಗಾಯಾಳುಗಳನ್ನು ಚಿಕಿತ್ಸೆಗೆ ಚಳ್ಳಕೆರೆ , ಚಿತ್ರದುರ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಬೆಂಗಳೂರಿಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ರಾಯಚೂರು ಮೂಲದ ಕಾರ್ಮಿಕರಾಗಿದ್ದಾರೆ.

ರಾಯಚೂರು ಜಿಲ್ಲೆ ದೇವದುರ್ಗ ತಾ. ಹೊಸೂರು ಗ್ರಾಮದ , ತಿಮ್ಮಣ್ಣ (40) ಪತ್ನಿ ರತ್ನಮ್ಮ (38) ಸೋಮನ ಮರಡಿ ಗ್ರಾಮದ ದುರುಗಪ್ಪ,(16) ಗಜಿಲಿ ಗ್ರಾಮದ ಮಹೇಶ (19) ಹಾಗೂ 55 ವರ್ಷದ ಓರ್ವ ಮೃತರಾಗಿದ್ದಾರೆ.

ಸ್ಥಳಕ್ಕೆ ಮೊಳಕಾಲ್ಮೂರು ಪೊಲೀಸ್ ಠಾಣೆಯ PSI ಬಸವರಾಜ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮಾಹಿತಿ ಪಡೆದುಕೊಂಡು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಪರಿಶೀಲನೆ ಮಾಡ್ತಾ ಇದ್ದಾರೆ.
