ಬೆಂಗಳೂರು –
ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ‘ಸರ್ಕಾರಿ ನೌಕರ’ರು ಫೆ.7ರಂದು ‘OPS ಜಾರಿ’ಗೆ ಆಗ್ರಹಿಸಿ ಧರಣಿ ಹೌದು ರಾಜ್ಯ ಸರ್ಕಾರದ ವಿರುದ್ಧ ಸರ್ಕಾರಿ ನೌಕರರು ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಎನ್ ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೊಳಿಸುವಂತೆ ಒತ್ತಾಯಿಸಿ ಓಪಿಎಸ್ ಹಕ್ಕೊತ್ತಾಯ ಧರಣಿಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ
ದಿನಾಂಕ:13.10.2022 ರಿಂದ ಒಂದು ತಿಂಗಳು OPS ಸಂಕಲ್ಪ ಯಾತ್ರೆಯನ್ನು ಹಾಗೂ 14 ದಿನಗಳ ಕಾಲ OPS ಜಾರಿಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಅಹೋ ರಾತ್ರಿ ಧರಣಿ ನಡೆಸಲಾಗಿತ್ತು ಹಾಗೂ ಜನವರಿ ತಿಂಗಳಿಂದ ಮೂರು ತಿಂಗಳ ಕಾಲ Vote for OPS ಅಭಿಯಾನವನ್ನು ನಡೆಸ ಲಾಗಿತ್ತು.ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು NPS ಯೋಜನೆಯನ್ನು ರದ್ದುಗೊಳಿಸುವ ಭರವಸೆಯನ್ನು ತನ್ನ ಪುಣಾಳಿಕೆಯಲ್ಲಿ ಸೇರಿಸಲಾಗಿತ್ತು
,ಮಾನ್ಯ ಮುಖ್ಯಮಂತ್ರಿಯವರು ಅಧಿಕಾರ ವಹಿಸಿ ಕೊಂಡ ತಕ್ಷಣ ನಮ್ಮ ಸಂಘದ ಪದಾಧಿಕಾರಿಗಳೊಂದಿಗೆ ದಿನಾಂಕ:13.06.2023 ರಂದು ಗ್ರಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರು ಸಭೆ ನಡೆಸಿ ಭರವಸೆಯನ್ನು ನೀಡಲಾಗಿತ್ತು ತಾವು ಸಹ ನಮ್ಮ ಸಂಘಟನೆಯೊಂದಿಗೆ ಸಭೆ ನಡೆಸಿ NPS ಯೋಜನೆಯನ್ನು ರದ್ದುಗೊಳಿಸುವ ಕುರಿತು ಕ್ರಮಕೈಗೊಳ್ಳುವುದಾಗಿ ಎಂದಿದ್ದಾರೆ.
ಮುಖ್ಯಮಂತ್ರಿಯವರು ದಿನಾಂಕ:06.01.2024 ರಂದು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮುಂದಿನ ಸಂಪುಟ ಸಭೆಯಲ್ಲಿ NPS ಯೋಜನೆಯ ರದ್ದತಿಯ ವಿಷಯವನ್ನು ಸಂಪುಟದ ಸಹದ್ಯೋಗಿಗ ಳೊಂದಿಗೆ ಚರ್ಚಿಸಿ, ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದರು. ಆದರೆ ಈ ನಡುವೆ ಕೇಂದ್ರ ಸರ್ಕಾರವು NPS ಬದಲು UPS ಏಕೀಕೃತ ಪಿಂಚಣಿ ಯೋಜನೆ ಯನ್ನು ಜಾರಿಗೊಳಿಸಲು ತೀರ್ಮಾನಿಸಿದ್ದು,
ಇದನ್ನು ರಾಷ್ಟ್ರಮಟ್ಟದಲ್ಲಿ NMOPS ಮತ್ತು ರಾಜ್ಯದಲ್ಲಿ ನಮ್ಮ ಸಂಘಟನೆಯು ಈ ಪುಸ್ತಾವನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, ನಮ್ಮ ಬೇಡಿಕೆಯು ಕೇವಲ ಹಳೆ ಪಿಂಚಣೆ ಯೋಜನೆಯನ್ನು ಮರುಜಾರಿ ಗೊಳಿಸುವುದಾಗಿದೆ ಎಂದಿದ್ದಾರೆ.
ಈ ನಡುವೆ ರಾಜ್ಯ ಸರ್ಕಾರವು ಕೆಲವು ರಾಜ್ಯಗಳಲ್ಲಿ OPS ಅನ್ನು ಜಾರಿಗೊಳಿಸಿದ್ದು, ಆ ರಾಜ್ಯಗಳಿಗೆ ಬೇಟಿ ನೀಡಿ ವರದಿ ಪಡೆದು ಪರಿಶೀಲಿಸುವ ಬಗ್ಗೆ ಸಮಿತಿ ಯನ್ನು ರಚಿಸಿದ್ದು, ಸರ್ಕಾರದ ಈ ಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ವಿರೋಧಿ ಸಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ದಿನಾಂಕ:19.01.2025 ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯು “ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ, NPS ಯೋಜನೆಯನ್ನು 2025-26ನೇ ಸಾಲಿನ ಆಯವ್ಯಯದಲ್ಲಿ ರದ್ದುಗೊಳಿಸುವ ಭರವಸೆಯು ದೊರಕದೇ ಇದ್ದಲ್ಲಿ, ದಿನಾಂಕ:07.02.2025 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘OPS ಹಕ್ಕೊತ್ತಾಯ’ ಧರಣಿ ನಡೆಸಲು ನಡೆಸಲು ಸರ್ವಾನು ಮತದ ನಿರ್ಣಯ ಕೈಗೊಳ್ಳಲಾಗಿರುತ್ತದೆ.
ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯ ನಿರ್ಧಾರದ ಹಿನ್ನೆಲೆಯಲ್ಲಿ, 2025-26ನೇ ಸಾಲಿನ ಆಯವ್ಯಯದಲ್ಲಿ ರದ್ದುಗೊಳಿಸುವ ಭರವಸೆಯು ದೊರಕದೇ ಇದ್ದಲ್ಲಿ; ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿಶ್ಚಿತ ಪಿಂಚಣಿಗೆ ಒತ್ತಾಯಿಸಿ, ದಿನಾಂಕ07.02.2025 ರಂದು ‘OPS ಹಕ್ಕೊತ್ತಾಯ’ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಹೇಳಿದ್ದಾರೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..