ಬೆಂಗಳೂರು –
ಹೌದು 7ನೇ ವೇತನ ಆಯೋಗ ರಚನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಸಚಿವಾಲಯದ ನೌಕರರು ನಗರದ ಫ್ರೀಡಂ ಪಾರ್ಕ್ ನಲ್ಲ ಬೃಹತ್ ಪ್ರತಿಭಟನೆ ನಡೆಸಿದರು.ಹಲವಾರು ತಿಂಗಳಿನಿಂದ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ನೂರಾರು ಸಂಖ್ಯೆಯಲ್ಲಿ ನೌಕರರು ಪ್ರತಿಭಟನೆ ಮಾಡಿ ಸರ್ಕಾರದ ಗಮನ ಸೆಳೆದರು.
ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಮಾತನಾಡಿ ಬೆಂಗಳೂರಿನ ಬಹುಮಹಡಿ ಕಟ್ಟಡದ ಮುಂಭಾಗದಲ್ಲಿ ಸರ್ಕಾರಿ ನೌಕರರ ವಿವಿಧ ಇಲಾಖೆ ಹಾಗೂ ವೃಂದ ಸಂಘಟನೆಗಳ ಒಕ್ಕೂಟದ ಜಂಟಿ ಕ್ರಿಯಾ ಸಮಿತಿ ಈ ಪ್ರತಿಭಟನೆಯನ್ನು ನಡೆಸುತ್ತಿದ್ದು ಸರ್ಕಾರಿ ನೌಕರರ ಪರಿಷ್ಕರಣೆಗಾಗಿ 7ನೇ ವೇತನ ಆಯೋಗ ರಚನೆ,ಎನ್ ಪಿಎಸ್ ರದ್ದುಪಡಿಸು ವುದು ಹಾಗೂ ನೌಕರ ವಿರುದ್ಧ ಆಡಳಿತ ಸುಧಾರಣೆ ಕ್ರಮಗಳನ್ನು ಕೈಬಿಡಬೇಕೆಂಬುದು ಪ್ರಮುಖ ಆಗ್ರಹವಾಗಿದ್ದು ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದರು.
ಇನ್ನೂ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಮಾದರಿ ಯಂತೆ ರಾಜ್ಯ ಸರ್ಕಾರ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗ ರಚನೆ ಮಾಡಬೇಕು ಹಿಂದೆ ಕೊಟ್ಟಿರುವ ಮಾತಿ ನಂತೆ ಕೂಡಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು
ಇನ್ನೂ ಕೋವಿಡ್ ಸಂದರ್ಭದಲ್ಲಿ ಮುಟ್ಟು ಗೋಲು ಹಾಕಿಕೊಂಡಿರುವ ನೌಕರರ ಹಾಗೂ ಪಿಂಚಣಿದಾರರ ಬಾಕಿ 18 ತಿಂಗಳ ತುಟ್ಟಿಭತ್ಯೆ ಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು 2022ರ ಜುಲೈನಿಂದ ಜಾರಿಗೆ ಬರುವಂತೆ ಶೇ.25ರಷ್ಟು ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಬೇಕೆಂದು ನೌಕರರ ಒತ್ತಾಯವಾಗಿದೆ ಎಂದು ಹೇಳಿದರು.
ಇನ್ನೂ ನೂತನ ಪಿಂಚಣಿ ಯೋಜನೆಯನ್ನು ರದ್ದು ಪಡಿಸಿ ಈ ಹಿಂದೆ ಇದ್ದ ನಿಶ್ಚಿತ ಪಿಂಚಣಿ ಪದ್ದತಿ ಮರುಸ್ಥಾಪಿಸಬೇಕು ಆಡಳಿತಾ ಸುಧಾರಣಾ ಆಯೋಗ ನೌಕರರ ವಿರೋಧಿ ಶಿಫಾರಸ್ಸುಗಳನ್ನು ತಿರಸ್ಕರಿಸಬೇಕು ಹಾಗೂ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ನಮ್ಮ ಬೇಡಿಕೆಗಳು ಕಾನೂನಿನ ವ್ಯಾಪ್ತಿಯಲ್ಲೇ ಇದ್ದು ಸರ್ಕಾರಕ್ಕೆ ಪದೇ ಪದೇ ಮನವಿ ಮಾಡಿಕೊಂ ಡರೂ ಪ್ರಯೋಜನವಾಗಿಲ್ಲ ಹೀಗಾಗಿ ನಾಳೆ ಸರ್ಕಾರದ ಗಮನಸೆಳೆಯಲು ರಾಜ್ಯ ಮಟ್ಟದ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.