ಮೈಸೂರು –
ಮೈಮುಲ್ ಚುನಾವಣೆಯಲ್ಲಿ ಸೋಲಿನ ಆಘಾತದಿಂದ ಮತ್ತು ಸಾಲ ಬಾಧೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಿಪಂ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಮು ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದವರಾಗಿ ದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.ಮೈಮುಲ್ ಚುನಾವಣೆಯಲ್ಲಿ ಸೋಲುಂಡಿದ್ದರು ಈ ಬಲರಾಮು.ಮೈಮುಲ್ ನಿರ್ದೇಶಕರಾಗಿ ಮತ್ತೆ ಸ್ಪರ್ಧೆ ಮಾಡಿದ್ದರು. ಜಿ.ಟಿ. ದೇವೇಗೌಡರ ಗುಂಪಿನಲ್ಲಿ ಗುರ್ತಿಸಿಕೊಂಡಿದ್ದ ಬಲರಾಮು.ಸೋಲಿನ ಆಘಾತ ಜೊತೆಗೆ ಸಾಲ ಬಾಧೆ ಹಿನ್ನೆಲೆಯಲ್ಲಿ ವಿಷ ಸೇವನೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.