ಬೆಂಗಳೂರು –
ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದಾರಾಮಯ್ಯ ಮೂರು ದಿನಗಳ ಹಾವೇರಿ ಬದಾಮಿ ಮತ್ತು ಹುಬ್ಬಳ್ಳಿ ಧಾರವಾಡ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 11 ರಂದು ಮಧ್ಯಾಹ್ನ 11 ಘಂಟೆಗೆ ಬೆಂಗಳೂರಿನ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹಾವೇರಿಯ ಹಿರೇಕೆರೂರಿಗೆ ಆಗಮಿಸಲಿದ್ದಾರೆ. ರಟ್ಟಿಹಳ್ಳಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಅಲ್ಲಿಂದ ರಸ್ತೆ ಮೂಲಕ ಹುಬ್ಬಳ್ಳಿಯಲ್ಲಿ ಕಾಂಗ್ರೇಸ್ ಪಕ್ಷ ಗ್ರಾಮೀಣ ಘಟಕ ಹಮ್ಮಿಕೊಂಡಿರುವ ಸಭೆಯಲ್ಲಿ ಪಾಲ್ಗೊಂಡು ವಾಸ್ತವ್ಯವನ್ನು ಮಾಡಲಿದ್ದಾರೆ. ನಂತರ ಡಿಸೆಂಬರ್ 12 ರಂದು ಹುಬ್ಬಳ್ಳಿಯಿಂದ ರಸ್ತೆ ಮೂಲಕ ಬದಾಮಿಗೆ ತೆರಳಿ ವಿವಿಧ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದೇ ಬದಾಮಿಯಲ್ಲಿ ವಾಸ್ತವ್ಯವನ್ನು ಮಾಡಿ ನಂತರ ಡಿಸೆಂಬರ್ 13 ರಂದು ಧಾರವಾಡಗೆ ಆಗಮಿಸಿ ನಗರದಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಜೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಿದ್ದಾರೆ.
ಡಿಸೆಂಬರ್ 11 ರಿಂದ ಹಾವೇರಿ , ಧಾರವಾಡ, ಬದಾಮಿ ಮೂರು ಕಡೆಗಳಿಗೆ ಸಿದ್ದರಾಮಯ್ಯನವರು ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ
ಬದಾಮಿ ಪ್ರವಾಸ ಕೈಗೊಳ್ಳಲಿದ್ದಾರೆ.