ಬೆಂಗಳೂರು –
ಸರ್ಕಾರಿ ಶಾಲಾ ಮಕ್ಕಳಿಗೆ ಶೂ,ಸಾಕ್ಸ್ ವಿತರಣೆ ವಿಚಾರ ರಾಜಕೀಯ ಕಚ್ಚಾಟಕ್ಕೂ ಕಾರಣವಾಗಿದೆ.ಈ ಬಾರಿ ಮಕ್ಕಳಿಗೆ ಶೂ,ಸಾಕ್ಸ್ ಕೊಡಲ್ಲ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡುತ್ತಿದ್ದಂತೆ ಕಾಂಗ್ರೆಸ್ ನಾಯಕರು ಆಕ್ಟಿವ್ ಆಗಿ ಸರ್ಕಾರದ ವಿರುದ್ಧ ಮುಗಿಬಿದ್ದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯದ ಜನರ ಬಳಿ ಭಿಕ್ಷೆ ಬೇಡಿಯಾದ್ರೂ ಮಕ್ಕಳಿಗೆ ಶೂ,ಸಾಕ್ಸ್ ನೀಡೋದಾಗಿ ಹೇಳಿದ್ರು.ಕಾಂಗ್ರೆಸ್ ನಾಯಕರು ವಿರೋಧಿಸುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಮಕ್ಕಳಿಗೆ ಶೂ,ಸಾಕ್ಸ್ ನೀಡುವುದಾಗಿ ಹೇಳಿದೆ.ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿರುದ್ಧ ಕಿಡಿಕಾರಿದ್ದಾರೆ.ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಒಬ್ಬ ಶಿಕ್ಷಣ ವಿರೋಧಿ ಅವಿವೇಕಿ.ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳಿಂದ ಶೂ-ಸಾಕ್ಸ್‌ಗಳನ್ನೂ ಕಿತ್ತು ಕೊಳ್ಳಲು ಹೊರಟಿದ್ದ ಮನುಷ್ಯತ್ವವೇ ಇಲ್ಲದ ಅವಿವೇಕಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಡುತ್ತಿರುವ ಎಡವಟ್ಟು ಗಳು ಒಂದೋ,ಎರಡೋ ಮೊದಲು ಈ ಶಿಕ್ಷಣ ವಿರೋಧಿ ಯನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಅನುದಾನ ಮೀಸಲಿಡದೇ ಇರುವುದರಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸುತ್ತಿದ್ದ ಸೈಕಲ್,ಶೂ,ಸಾಕ್ಸ್ ಯೋಜನೆಗಳನ್ನು ಶಿಕ್ಷಣ ಇಲಾಖೆ ಕೈ ಬಿಟ್ಟಿತ್ತು.ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ನಾಯಕರು ಟೀಕಿಸಿದ್ದರು.ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿ ಸಲು ₹ 132 ಕೋಟಿ ಮೊತ್ತದ ಪ್ರಸ್ತಾವನೆಗೆ ಅನುಮೋ ದನೆ ನೀಡಿದ್ದಾರೆ.ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸುವ ವಿಚಾರ ವಾಗಿ ಟ್ವೀಟ್ ಮಾಡಿರುವ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ನಿದ್ದೆ ಬಿಡಿಸ ಬೇಕಾದರೆ ನಾವು ಎಚ್ಚರಿಸಬೇಕಾಯಿತು ಎಂದು ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್ ಮಾಡುವ ಜತೆಗೆ ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡಿರುವ ಅವರು,ಶೂ,ಸಾಕ್ಸ್ ಬಗ್ಗೆ ಸಚಿವರ ಹೇಳಿಕೆ ವಿಚಾರ ಪ್ರಸ್ತಾಪಿಸಿ,ನಾವು ಬಡಮಕ್ಕಳಿಗೆ ಅನುಕೂಲ ವಾಗಲೆಂದು ಸಾಕ್ಸ್ ,ಶೂ ಕೊಡುತ್ತಿದ್ದೆವು.ಆದರೆ ಇವರು ನಿಲ್ಲಿಸಲು ಹೊರಟರು.ನಾವು ಒತ್ತಾಯ ಮಾಡಿದ ಮೇಲೆ ಕೊಡುತ್ತೇವೆ ಎಂದರು.ಶಾಲೆಗಳು ಆರಂಭವಾಗಿವೆ.ಶೂ, ಸಮವಸ್ತ್ರ ಕೊಡಬೇಕಿತ್ತು.ಆದರೆ ಇನ್ನೂ ಯಾವುದನ್ನೂ ಕೊಟ್ಟಿಲ್ಲ.ತಕ್ಷಣ ವಿತರಣೆ ಕಾರ್ಯ ಆರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸರ್ಕಾರವನ್ನು ಒತ್ತಾಯಿಸಿದ್ದಾರೆ.