ಬೆಂಗಳೂರು –
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮ ಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಹೌದು ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಈ ಒಂದು ಘಟನೆ ನಡೆದಿದೆ.

ಬಿ ಎಸ್ ವೈ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಹೊಟೇಲ್ ಪಕ್ಕದಲ್ಲಿನ ಅಪಾರ್ಟ್ಮೆಂಟ್ ನಲ್ಲಿನ ನಿವಾಸದಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಂದರ್ಯ ಅವರು ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು.ಇನ್ನೂ ಮೃತದೇಹ ವನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.