ಬೆಂಗಳೂರು –
ಶಿಕ್ಷಣ ಸಚಿವರಾಗಲು ಸುರೇಶ್ ಕುಮಾರ್ ಅಸಮ ರ್ಥರು ಎಂದು ಬೆಂಗಳೂರು ಮಹಾನಗರ ಪಾಲಿಕೆ ಯ ಮಾಜಿ ಮೇಯರ್ ಜಿ ಪದ್ಮಾವತಿ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವಿಷಯದಲ್ಲಿ ಗೊಂದಲ ಮೂಡಿಸಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಸುರೇಶ್ ಕುಮಾರ್ ಅವರು ಶಿಕ್ಷಣ ಸಚಿವರಾಗಲು ಅಸಮರ್ಥರು ಎಂದರು.
ಶಿಕ್ಷಣ ಸಚಿವರಾದ ನಂತರ ದಿನಕ್ಕೊಂದು ರೀತಿಯ ಗೊಂದಲದ ಹೇಳಿಕೆ ನೀಡುತ್ತಾ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುತ್ತಿದ್ದಾರೆ ಕೊರೊನಾ ಸಂಕಷ್ಟ ದ ಹಿನ್ನಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿ ಗ್ರೇಡ್ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವುದಾಗಿ ಈ ಹಿಂದೆ ಘೋಷಿಸಿದ್ದರು. ಆದರೆ ಇದೀಗ ಮಾತು ಬದಲಿಸಿರುವ ಸಚಿವರು ಗ್ರೇಡ್ ಆಧಾರ ರದ್ದುಗೊಳಿಸಿ SSLC ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ಅಂಕ ನೀಡು ವುದಾಗಿ ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆಂದರು ಇದರಿಂದ ಇದುವರೆಗೂ ನೆಮ್ಮದಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆತಂಕ ಎದುರಾಗಿದೆ ಎಂದು ಅವರು ದೂರಿದರು.
ಸುರೇಶ್ ಕುಮಾರ್ ಅವರಿಗೆ ನಾನು ಅನ್ನುವ ಆಹಂ ಇದೆ. ಹೀಗಾಗಿಯೇ ಅವರು ಪರೀಕ್ಷೆ ವಿಷಯದಲ್ಲಿ ಯಾರನ್ನು ಗಣನೆಗೆ ತೆಗೆದುಕೊಳ್ಳದೆ ಮನಬಂದಂತೆ ನಿಯಮಗಳನ್ನು ಜಾರಿ ಮಾಡುತ್ತಿದ್ದಾರೆ ಎಂದು ಪದ್ಮಾವತಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಇಂದಿನ ವಿದ್ಯಾರ್ಥಿ ಸಮುದಾಯ ಸೂಕ್ಷ್ಮ ಸ್ವಭಾವ ದವರು ದಿನಕ್ಕೊಂದು ಹೇಳಿಕೆ ನೀಡಿದರೆ ಅವರ ಮನಸ್ಸಿಗೆ ಆಘಾತವಾಗುತ್ತದೆ. ಹೀಗಾಗಿ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ತಜ್ಞರೊಂದಿಗೆ ಸಮಾ ಲೋಚಿಸುವುದು ಸೂಕ್ತ ಎಂದು ಅವರು ಅಭಿಪ್ರಾ ಯಪಟ್ಟರು.ಸುರೇಶ್ ಕುಮಾರ್ ಅವರು ಯಾವು ದೇ ನಿರ್ಧಾರ ಕೈಗೊಳ್ಳುವ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ತಜ್ಞರ ಸಲಹೆ ಸ್ವೀಕರಿಸಿ ಒಂದು ಉತ್ತಮ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದ ರು.ಇನ್ನೂ SSLC ವಿದ್ಯಾರ್ಥಿಗಳಿಗೆ ಜುಲೈ ಮೂರ ನೇ ವಾರದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳುತ್ತಿದ್ದಾರೆ.ಮಕ್ಕಳು ಪರೀಕ್ಷೆಗೆ ತಯಾರಿ ನಡೆಸಿದ ನಂತರ ಮತ್ತೆ ಯಾವ ರೀತಿಯ ಹೇಳಿಕೆ ನೀಡಿ ಗೊಂದಲ ಮೂಡಿಸುತ್ತಾರೋ ಎಂಬ ಆತಂಕ ಪೋಷಕರನ್ನು ಕಾಡುತ್ತಿದೆ.ಈಗಲಾದರೂ ಸುರೇಶ್ ಕುಮಾರ್ ಅವರು ತಮ್ಮ ಈಗೋ ಬದಿಗೊತ್ತಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿ ತಜ್ಞರ ಸಲಹೆ ಮೇರೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.ಪೋಷಕರು ಹಾಗೂ ವಿದ್ಯಾರ್ಥಿ ಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ನೀವು ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪದ್ಮಾ ವತಿಯವರು ಆಗ್ರಹಿಸಿದ್ದಾರೆ.