ಧಾರವಾಡ –
ಯೊಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನವಾಗಿದೆ.ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನ್ಯಾಯಾಂಗ ಬಂಧನದ ಅವಧಿ ಇಂದು ಮುಗಿದ ಹಿನ್ನಲೆಯಲ್ಲಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಇಂದು ವಿಡಿಯೋ ಕಾನ್ಪರನ್ಸ್ ಮೂಲಕ ವಿಚಾರಣೆ ಮಾಡಿದರು.
ವಿಚಾರಣೆ ಮಾಡಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ ಸಿ ಎಮ್ ಡಿಸೆಂಬರ್ 21 ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದ್ರು. ಸಿಬಿಐ ಪರವಾಗಿ ನ್ಯಾಯವಾದಿಗಳು ಹಾಜರಾದ್ರೆ ಇತ್ತ ಮಾಜಿ ಸಚಿವ ವಿನಯ ಕುಲಕರ್ಣಿ ಪರವಾಗಿ ಅವರ ನ್ಯಾಯವಾದಿಗಳು ನ್ಯಾಯಾಲಯಕ್ಕೇ ಹಾಜರಾಗಿದ್ದರು.