ಬೆಂಗಳೂರು – ಕೊನೆಗೂ ರಾಜ್ಯ ಸರ್ಕಾರ ರಾಜ್ಯದಲ್ಲಿನ ನಿಗಮ ಮಂಡಳಿಗೆ ನೇಮಕ ಮಾಡಿದೆ.ಮುಖ್ಯಮಂತ್ರಿ ಯಡಿಯೂರಪ್ಪ ಖಾಲಿ ಇದ್ದ ನಿಗಮ ಮಂಡಳಿಗೆ ನೇಮಕ ಮಾಡಿ ಅಧಿಕಾರವನ್ನು ನೀಡಿದ್ದಾರೆ. ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಪ್ತು ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.ಈ ಒಂದು ನಿಗಮದ ಅಧ್ಯಕ್ಷರಾಗಿ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರ ಇವರನ್ನು ನೇಮಕ ಮಾಡಲಾಗಿದೆ.

ಎಸ್ ಐ ಚಿಕ್ಕನಗೌಡ್ರು ಮಾಜಿ ಶಾಸಕರು ಹಾಗೇ ಎಲ್ಲದಕ್ಕಿಂತ ಮುಖ್ಯವಾಗಿ ಯಡಿಯೂರಪ್ಪನವರಿಗೆ ಬೀಗರು ಹೌದು ಹೀಗಾಗಿ ಇವರಿಗೆ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಪ್ತು ನಿಗಮಕ್ಕೆ ಅಧ್ಯಕ್ಷ ಪಟ್ಟ ಒದಗಿ ಬಂದಿದೆ.

ಅಧ್ಯಕ್ಷರಾಗುತ್ತಿದ್ದಂತೆ ಧಾರವಾಡ ಜಿಲ್ಲೆಯಲ್ಲಿ ಅಭಿಮಾನಿಗಳು ಕಾರ್ಯಕರ್ತರು ಪಕ್ಷದ ಜಿಲ್ಲೆಯ ಮುಖಂಡರು ಸೇರಿದಂತೆ ಎಲ್ಲರೂ ಅಭಿನಂದನೆಗಳನ್ನು ತಿಳಿಸಿದ್ದಾರೆ.