ನವದೆಹಲಿ –
ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ವಿಧಿವಶ ವಾಗಿದ್ದಾರೆ.ಹೌದು ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆ ಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್‌ಮೋಹನ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. 92 ವರ್ಷ ವಯಸ್ಸಾದ ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು
ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು.ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದರು.
ಮನ್‌ಮೋಹನ್ ಸಿಂಗ್ ಅವರು ಇತ್ತೀಚಿನ ವರ್ಷಗಳಲ್ಲಿ ಆರೋಗ್ಯದ ಕಾರಣಗಳಿಂದ ರಾಜಕೀಯದಿಂದ ದೂರ ವಿದ್ದರು ಮತ್ತು 2024ರ ಆರಂಭದಿಂದಲೂ ಅವರ ಆರೋಗ್ಯ ಚೆನ್ನಾಗಿರಲಿಲ್ಲ. 2024ರ ಜನವರಿಯಲ್ಲಿ ಅವರು ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿ ಕೊಂಡಿದ್ದರು. ಮಗಳ ಪುಸ್ತಕ ಬಿಡುಗಡೆ ಸಮಾರಂ ಭದಲ್ಲಿ ಅವರು ಭಾಗಿಯಾಗಿದ್ದರು.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..