ಹಾವೇರಿ
ಚಾಲಕನ ನಿಯಂತ್ರಣ ತಪ್ಪಿದ ಇನ್ನೊವ್ಹಾ ಕಾರೊಂದು ಪಲ್ಟಿಯಾದ ಘಟನೆ ಹಾವೇರಿ ಯಲ್ಲಿ ನಡೆದಿದೆ.

ಹಾವೇರಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಒಂದು ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಬೆಂಗಳೂರಿನತ್ತ ಹೊರಟಿದ್ದ ಇನ್ನೊವ್ಹಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ಉರುಳಿ ಬಿದ್ದು ಪಲ್ಟಿಯಾಗಿದೆ.

ಇನ್ನೂ ಕಾರಿನಲ್ಲಿದ್ದ ನಾಲ್ವರು ಪಾರಾಗಿದ್ದು ಒರ್ವ ಬಾಲಕನಿಗೆ ಕಾಲಿಗೆ ಸ್ವಲ್ಪ ಮಟ್ಟಿಗೆ ಗಾಯವಾಗಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ 108 ಸಿಬ್ಬಂದಿಗಳಾದ EMT ಶಂಕರ್ ಮತ್ತು ತೌಫಿಕ್ ಆಸ್ಪತ್ರೆಗೆ ದಾಖಲು ಮಾಡಿದರು.

ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.