ಬೆಳ್ಳಂ ಬೆಳಿಗ್ಗೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಾಲ್ವರು ಸಾವು – ಸಂಪೂರ್ಣವಾಗಿ ನುಜ್ಜು ಗುಜ್ಜಾದ ಎರಡು ಕಾರುಗಳು

Suddi Sante Desk

ರಾಣೆಬೆನ್ನೂರು –

ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಹಾವೇರಿ ನಗರದ ರಾಷ್ಟ್ರೀಯ ಹೆದ್ದಾರಿ ಯ ಬೈಪಾಸ್‌ ಹತ್ತಿರ ಸಂಭವಿಸಿದೆ.ಹೌದು ಎರಡು ಕಾರು ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸಾವಿಗೀಡಾಗಿದ್ದಾರೆ.ಇನ್ನೂ ಈ ಒಂದು ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ

ಗುಜರಾತ್‌ ಮೂಲದ ಕಾರಿನಲ್ಲಿದ್ದ ಮೂವರು ಮತ್ತೊಂದು ಕಾರಿನಲ್ಲಿದ್ದ ಕೇರಳ ಮೂಲದ ಒಬ್ಬರು ಮೃತಪಟ್ಟಿದ್ದಾರೆ. ಮೃತರ ಹೆಸರು ಪತ್ತೆಯಾಗಿಲ್ಲ.ಮೂವರು ಸ್ಥಳದಲ್ಲೇ ಮೃತಪಟ್ಟರೆ ಒಬ್ಬ ಗಂಭೀರವಾಗಿದ್ದು ಗಾಯಗೊಂಡು ರಾಣೆಬೆನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಅಪಘಾತ ನಡೆದ ಸ್ಥಳಕ್ಕೆ ನಗರದ ಸಂಚಾರ ಠಾಣೆ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಖಂಗೊಂಡಿದ್ದ ವಾಹನಗಳನ್ನು ತೆರವುಗೊಳಿಸಿ, ಇತರ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.