ಚಿಕ್ಕಬಳ್ಳಾಪುರ –
ಚಿಕ್ಕಬಳ್ಳಾಪುರ ತಾಲೂಕಿನ ಹಿರೇನಾಗವೇಲ್ಲಿ ಸ್ಪೋಟ ಪ್ರಕರಣ ಕುರಿತು ನಾಲ್ಕು ಜನ ಪ್ರಮುಖ ಆರೋಪಿಗಳನ್ನು ಬಂಧನ ಮಾಡಲಾಗಿದೆ. ತಾಲ್ಲೂಕಿನ ವೇಲಿಯಲ್ಲಿನ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, 6 ಜನ ಸಾವನ್ನಪ್ಪಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಲೀಕರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಅಲ್ಲದೇ, ಮತ್ತೊಬ್ಬ ಮಾಲೀಕ ಹಾಗೂ ಪ್ರಮುಖ ಆರೋಪಿ ನಾಗರಾಜ್ ತಲೆ ಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ರಾಘವೇಂದ್ರ ರೆಡ್ಡಿ, ಪ್ರವೀಣ್, ರಿಯಾಜ್, ಮಧುಸೂದನ್ ರೆಡ್ಡಿ ಬಂಧಿತ ಆರೋಪಿಗ ಳಾಗಿದ್ದಾರೆ ಇವರನ್ನು ಆಂಧ್ರಪ್ರದೇಶದಲ್ಲಿ ಬಂಧಿಸಲಾಗಿದೆ. ಕ್ವಾರೆಯ ಪ್ರಮುಖ ಮಾಲೀಕ ಹಾಗೂ ಪ್ರಮುಖ ಆರೋಪಿ ನಾಗರಾಜ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಈ ಘಟನೆ ಯನ್ನು ಇಡೀ ದೇಶವೇ ಖಂಡಿಸಿದೆ.ಆರೋಪಿತರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಹೇಳಿತ್ತು ಈಗ ನಾಲ್ಕು ಜನರನ್ನು ಬಂಧನ ಮಾಡಲಾಗಿದ್ದು ತನಿಖೆ ಮುಂದುವರಿದಿದೆ.