ಬೆಂಗಳೂರು –
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಒದಗಿ ಸಿರುವ ವಿದ್ಯುತ್ ಸೌಲಭ್ಯವನ್ನು ಉಚಿತವಾಗಿ ಒದಗಿಸುವ ಕುರಿತು ರಾಜ್ಯ ಸರ್ಕಾರ ಪರಿಷ್ಕೃತ ವಾದ ಆದೇಶವನ್ನು ಹೊರಡಿಸಿದೆ.ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ(1)ರ ಸರ್ಕಾರದ ಪತ್ರದಲ್ಲಿ ತಿಳಿಸಿರುವಂತೆ 2024- 25ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಆಯವ್ಯಯ ಘೋಷಿತ ಕಂಡಿಕೆ 102: ರಲ್ಲಿ ಈ ಒಂದು ವಿಷಯ ಕುರಿತು ಆದೇಶವನ್ನು ಹೊರಡಿಸಲಾಗಿದೆ
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗ ಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ.ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿಪೂರ್ವ ಕಾಲೇಜುಗಳಿಗೆ ಅನುಕೂಲವಾ ಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ ” ಎಂದು ಘೋಷಿಸಲಾಗಿರುತ್ತದೆ ಎಂದು ಉಲ್ಲೇಖ ವನ್ನು ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..