ಬಾಗಲಕೋಟೆ –
ಕಳೆದ ಹತ್ತು ದಿನಗಳಿಂದ ರಾಜ್ಯದ ಬೇರೆ ಬೇರೆ ಪ್ರವಾಸದಲ್ಲಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರ ಶೈಕ್ಷಣಿಕ ಯಾತ್ರೆ ಮುಂದುವರೆದಿದೆ.ಕಾಲಿಗೆ ಚಕ್ರವನ್ನು ಕಟ್ಟಿಕೊಂಡು ತಿರುಗಾಡುತ್ತಿರುವ ಸಚಿವರು ಸರ್ಕಾರಿ ಶಾಲಾ ಕಾಲೇಜುಗಳಿಗೆ ಭೇಟಿ ನೀಡುತ್ತಾ ಇದರ ಮಧ್ಯೆ ನಿಗದಿ ಪಡಿಸಿದ ಹಲವಾರು ಕಾರ್ಯಕ್ರಮ ಗಳಲ್ಲಿ ಪಾಲ್ಗೊಳ್ಳು ತ್ತಿದ್ದಾರೆ.
ಹೌದು ಮಾಧ್ಯಮಿಕ ಪ್ರೌಢಶಾಲಾ ಸಹಶಿಕ್ಷಕರ ಸಂಘ ಬಾಗಲಕೋಟೆಯ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020 ಕಾರ್ಯಾಗಾರಕ್ಕೆ ಚಾಲನೆ ನೀಡಿದರು ಇದೇ ವೇಳೆ ಶಿಕ್ಷಕರು,ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದರು.