This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

ಧಾರವಾಡ

ರಾಜ್ಯಮಟ್ಟದ ಪ್ರತಿಭಾ ಕಾರಂಜಿಗೆ ಸಜ್ಜಾಗುತ್ತಿದೆ ವಿದ್ಯಾ ನಗರಿ ಧಾರವಾಡ  – JSS ಕಾಲೇಜ್ ನಲ್ಲಿ ಫೆಬ್ರವರಿ 8 ರಿಂದ ನಡೆಯಲಿದೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ…..

ರಾಜ್ಯಮಟ್ಟದ ಪ್ರತಿಭಾ ಕಾರಂಜಿಗೆ ಸಜ್ಜಾಗುತ್ತಿದೆ ವಿದ್ಯಾ ನಗರಿ ಧಾರವಾಡ  – JSS ಕಾಲೇಜ್ ನಲ್ಲಿ ಫೆಬ್ರವರಿ 8 ರಿಂದ ನಡೆಯಲಿದೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ…..
WhatsApp Group Join Now
Telegram Group Join Now

ಧಾರವಾಡ

ರಾಜ್ಯಮಟ್ಟದ ಪ್ರತಿಭಾ ಕಾರಂಜಿಗೆ ಸಜ್ಜಾಗುತ್ತಿದೆ ವಿದ್ಯಾ ನಗರಿ ಧಾರವಾಡ  – JSS ಕಾಲೇಜ್ ನಲ್ಲಿ ಫೆಬ್ರವರಿ 8 ರಿಂದ ನಡೆಯಲಿದೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಹೌದು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ಫೆಬ್ರವರಿ 8 ಮತ್ತು 9 ರಂದು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಹೌದು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಡಳಿತ ಹಾಗೂ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಲಯ ಹಾಗೂ ಜನತಾ ಶಿಕ್ಷಣ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ವನ್ನು ಆಯೋಜಿಸಲಾಗಿದೆ

ಫೆಬ್ರವರಿ 8 ಮತ್ತು 9 ರಂದು ಬೆಳಿಗ್ಗೆ 10 ಗಂಟೆಗೆ ವಿದ್ಯಾಗಿರಿ ಜೆ.ಎಸ್.ಎಸ್. ಆವರಣದ ಸನ್ನಿಧಿ ಕಲಾಕ್ಷೇತ್ರದಲ್ಲಿ ಈ ಒಂದು ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದೆ.

ಮುರುಘಾಮಠದ ಡಾ. ಮಲ್ಲಿಕಾರ್ಜುನ ಮಹಾ ಸ್ವಾಮಿಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸುವರು.ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಘನ ಉಪಸ್ಥಿತರಿರುವರು.

ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿ ಸುವರು. ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ,

ಶಾಸಕ ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ನಿಗಮದ ಅಧ್ಯಕ್ಷ ರಾದ ಜೆ.ಎಂ.ಗಣೇಶ ಅವರು ವಿಶೇಷ ಅತಿಥಿ ಗಳಾಗಿ ಆಗಮಿಸುವರು. ಶಾಸಕರಾದ ಅರವಿಂದ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ವೀಣಾ ಚೇತನ ಭರದ್ವಾಡ ಅವರು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಬೆಂಗಳೂರಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೇಶ ಕುಮಾರ ಸಿಂಗ್, ಕೆ.ಯು.ಐ.ಡಿ.ಎಫ್.ಸಿಯ ವ್ಯವಸ್ಥಾಪಕ ನಿರ್ದೇ ಶಕರು ಹಾಗೂ ಧಾರವಾಡದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ. ಕಾವೇರಿ, ಕರ್ನಾಟಕ ಸಮಗ್ರ ಶಿಕ್ಷಣದ ರಾಜ್ಯ ಯೋಜನಾ ನಿರ್ದೇಶಕ ಕೆ.ಎನ್.ರಮೇಶ,

ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿಂಧು ಬಿ.ರೂಪೇಶ, ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಎಸ್.ಆಕಾಶ, ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತೆ ಜಯಶ್ರೀ ಶಿಂತ್ರಿ ಸೇರಿದಂತೆ ಇತರ ಅಧಿಕಾರಿಗಳು, ವಿವಿಧ ಜನ ಪ್ರತಿನಿಧಿಗಳು ಭಾಗವಹಿಸುವರೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk