ನಾಳೆ ಸಾರ್ವತ್ರಿಕ ರಜೆ ಘೋಷಣೆ – ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ರಜೆ ಘೋಷಣೆ ಗೊತ್ತಾ ಕಂಪ್ಲೀಟ್ ಮಾಹಿತಿ…..

Suddi Sante Desk
ನಾಳೆ ಸಾರ್ವತ್ರಿಕ ರಜೆ ಘೋಷಣೆ – ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ರಜೆ ಘೋಷಣೆ ಗೊತ್ತಾ ಕಂಪ್ಲೀಟ್ ಮಾಹಿತಿ…..

ಬೆಂಗಳೂರು

ನಾಳೆ ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು ಮತದಾನ ಮಾಡಲ ಅನುಕೂಲವಾಗುವ ನಿಟ್ಟಿನಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ ಹೌದು ಈ ಒಂದು ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯ. ದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ 14 ಲೋಕ ಸಭಾ ಕ್ಷೇತ್ರಗಳಿಗೆ 07.05.2024ರಂದು ಚುನಾ ವಣೆ ನಡೆಯಲಿದೆ ಹೀಗಾಗಿ ಸದರಿ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ರಜೆ ಘೋಷಣೆ ಮಾಡಲಾಗಿದೆ.

ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ,ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳ ಗೊಂಡಂತೆ ದಿನಾಂಕ:26.04.2024 ಮತ್ತು ದಿನಾಂಕ:07.05.2024ರಂದು ನಡೆಯುವ ಚುನಾವಣೆಗೆ ಕೆಳಗಿನ ಅಂಕಣದಲ್ಲಿ ನಮೂ ದಿಸಿರುವ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾ ಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಸ್ಥೆಗ ಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪುಜಾಪ ತಿನಿಧಿ ಕಾಯ್ದೆ 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಈ ಮೂಲಕ ಆದೇಶಿಸಲಾಗಿದೆ

ದಿನಾಂಕ:26.04.2024 ಮತ್ತು 07.05.2024 ರಂದು ಸಾರ್ವತ್ರಿಕ ರಜೆಯನ್ನು Negotiable Instrument Act 1881ರ ಪ್ರಕಾರವು ಸಹ ಘೋಷಿಸಿದೆ.ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಹೇಳಲಾಗಿದೆ.

ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಸಾರ್ವತ್ರಿಕ ರಜೆ ಘೋಷಣೆ

  1. ಚಿಕ್ಕೋಡಿ
  2. ಬೆಳಗಾವಿ
  3. ಬಾಗಲಕೋಟೆ
  4. ವಿಜಯಪುರ
  5. ಕಲಬುರಗಿ
  6. ರಾಯಚೂರು
  7. ಬೀದರ್
  8. ಕೊಪ್ಪಳ
  9. ಬಳ್ಳಾರಿ
  10. ಹಾವೇರಿ
  11. ಧಾರವಾಡ
  12. ಉತ್ತರ ಕನ್ನಡ
  13. ದಾವಣಗೆರೆ
  14. ಶಿವಮೊಗ್ಗ

ದಿನಾಂಕ:07.05.2024ರಂದು ಚುನಾವಣಾ ಕ್ಷೇತ್ರದ ಹೆಸರು ನಡೆಯಲಿರುವ ವಿಧಾನಸಭಾ ಉಪ ಚುನಾವಣೆ -36-ಸುರಪುರ, ಯಾದಗಿರಿ ಜಿಲ್ಲೆಯಲ್ಲಿಯೂ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.