ಧಾರವಾಡ –
ರಾಜ್ಯ ಸರ್ಕಾರಿ ನೌಕರರ ಸಂಘದ ಧಾರವಾಡ ಜಿಲ್ಲಾ ಘಟಕದಿಂದ ಆಗಸ್ಟ್ 4 ರಂದು ಜಿಲ್ಲೆಯ ಸಚಿವರು, ಶಾಸಕರಿಗೆ ಅಭಿನಂದನೆ ಮತ್ತು ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯ ಹಾಗೂ 2023-24 ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಆಯೋಜನೆ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ SF ಸಿದ್ದನಗೌಡರ ಮಾಹಿತಿ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕ ಧಾರವಾಡ ವತಿಯಿಂದ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ 7ನೇ ವೇತನ ಆಯೋಗ ಜಾರಿ ಮಾಡಿರುವ ಕುರಿತು ಶಾಸಕರು ಹಾಗೂ ಸಚಿವರಿಗೆ ಅಬಿನಂದನಾ ಸಮಾರಂಭ, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಯಲ್ಲಿ ಗರಿಷ್ಟ ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಆಗಸ್ಟ 04 ರ ರವಿವಾರ ಬೆಳಿಗ್ಗೆ 10 ಗಂಟೆಗೆ ಧಾರವಾಡ ನಗರದ ರಪಾಟಿ ಕಲ್ಯಾಣ ಮಂಟಪ ದಲ್ಲಿ ಈ ಒಂದು ಕಾರ್ಯಕ್ರಮ ವನ್ನು ಆಯೋಜಿ ಸಲಾಗಿದೆ ಎಂದು ಅಧ್ಯಕ್ಷ ಎಸ್.ಎಫ್. ಸಿದ್ದನ ಗೌಡರ ಅವರು ತಿಳಿಸಿದ್ದಾರೆ.
,ಪ್ರತಿ ವರ್ಷದಂತೆ ಈ ವರ್ಷವೂ ಸಹ ಧಾರವಾಡ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗಾಗಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿದ 75 ಎಸ್.ಎಸ್.ಎಲ್.ಸಿ ಹಾಗೂ 95 ಪಿ.ಯು.ಸಿ ಗೆ ಒಟ್ಟು 170 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪಡಿಸ ಲಾಗಿದೆ.
ಕಾರ್ಯಕ್ರಮವನ್ನು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಉದ್ಘಾಟಿಸಲಿ ದ್ದಾರೆ. ಪ್ರತಿಭಾ ಪುರಸ್ಕಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ನೇರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ಜನಪ್ರತಿನಿ ಧಿಗಳು ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ರಾಜ್ಯ ಸಂಘದ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಖ್ಯಾತ ಶಿಕ್ಷಣ ತಜ್ಙರಾದ ಸುರೇಶ ಕುಲಕರ್ಣಿಯವರು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃಧ್ಧಿ ಕುರಿತು ಉಪನ್ಯಾಸ ನೀಡಲಿ ದ್ದಾರೆ. ಜಿಲ್ಲೆಯ ಎಲ್ಲ ನೌಕರರ ಮಕ್ಕಳು ಇದರ ಸದುಪಯೋಗ ಮಾಡಿಕೊಳ್ಳಲು ಅವರು ವಿನಂತಿಸಿದ್ದಾರೆ.
ಇನ್ನೂ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾದ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸಂಘದ ವತಿಯಿಂದ ವಿದ್ಯಾರ್ಥಿಗಳ ಪಾಲಕರಿಗೆ ಖುದ್ದಾಗಿ ದೂರವಾಣಿ ಮೂಲಕ ಕರೆ ಮಾಡಿ ಮಾಹಿತಿ ಕೊಡಲಾಗಿದ್ದು, ಎಲ್ಲ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಪುರಸ್ಕೃತಗೊಂಡ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಪ್ರಶಂಸನಾ ಪತ್ರ, ನಗದು ಬಹುಮಾ ನದ ಹಾಗೂ ಪ್ರಮಾಣ ಪತ್ರಗಳನ್ನು ಇಟ್ಟು ಕೊಳ್ಳುವ ಫೈಲ್ ಗಳನ್ನು ಕೊಡುವದರೊಂದಿಗೆ ಸತ್ಕರಿಸಲಾಗುತ್ತಿದೆ. ಆಗಮಿಸುವ ಎಲ್ಲ ವಿದ್ಯಾರ್ಥಿಗಳಿಗೆ, ಅವರ ಪಾಲಕರಿಗೆ, ಹಾಗೂ ಅಧಿಕಾರಿ, ನೌಕರರಿಗೆ ಮದ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಹಾಗೂ ತಾಲೂಕಿನ ರಾಜ್ಯ ಸರ್ಕಾರಿ ನೌಕರ ಸಂಘದ ಎಲ್ಲ ಹಂತದ ಪದಾಧಿಕಾರಿಗಳು, ವಿವಿಧ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ನೌಕರರು ಹಾಗೂ ಅವರ ಕುಟುಂಬ ವರ್ಗವದವರು ಭಾಗವಹಿಸಲು ಅವರು ವಿನಂತಿಸಿದ್ದಾರೆ.
ಎಲ್ಲ ರೀತಿಯಿಂದ ಅತ್ಯಂತ ಯಶಸ್ವಿಗೊಳಿಸುವ ಕುರಿತು ಈಗಾಗಲೇ ಕೆಲವು ಸಮಿತಿಗಳನ್ನು ಮಾಡಿದ್ದು ಆ ಎಲ್ಲ ಸಮಿತಿಯವರ ಹಾಗೂ ಉಳಿದ ಎಲ್ಲ ಪದಾಧಿಕಾರಿಗಳ ಸಹಕಾರದೊಂ ದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಧಾರವಾಡ ಜಿಲ್ಲಾ ನೌಕರ ಸಂಘದ ಅಧ್ಯಕ್ಷರಾದ ಎಸ್.ಎಫ್.ಸಿದ್ದನಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..