ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆಯಾಗಿ ತುಟ್ಟಿಭತ್ಯೆ ನೀಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಒತ್ತಾಯವನ್ನು ಮಾಡಿದೆ.ರಾಜ್ಯದ ಸಮಸ್ತ ಸರ್ಕಾರಿ ನೌಕರರ ಧ್ವನಿಯಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಅವರು ಬೇಡಿಕೆ ಇಟ್ಟಿದ್ದಾರೆ.ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾ ಟಕ ಸರ್ಕಾರವೂ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವುದು ಸಂಪ್ರದಾಯ.ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ 2022ರ ಜ.1ರಿಂದ ಪೂರ್ವಾನ್ವಯವಾಗಿ ತನ್ನ ನೌಕರರಿಗೆ ಶೇ.3 ತುಟ್ಟಿಭತ್ಯೆ ಮಂಜೂರು ಮಾಡಿ ಉಲ್ಲೇಖಿತ ಆದೇಶ ವನ್ನು ಹೊರಡಿಸಿದೆ.
ಆದ್ದರಿಂದ ಪ್ರಸ್ತುತ ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾ ಧರಿಸಿ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ ಈ ವರ್ಷದ ಜ. 1ರಿಂದ ಪೂರ್ವಾನ್ವಯ ಆಗುವಂತೆ ಶೇ. 3 ತುಟ್ಟಿಭತ್ಯೆ ಬಿಡುಗಡೆಗೊಳಿಸಿ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿಯವರಿಗೆ ಕರ್ನಾ ಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪತ್ರಮುಖೇನ ಮನವಿ ಮಾಡಿಕೊಂ ಡಿದ್ದಾರೆ.