ಲಿಂಗಾಯತರಿಗೆ ಮೀಸಲಾತಿ ನೀಡಿ – MB ಪಾಟೀಲ್
ವಿಜಯಪುರ –
ಲಿಂಗಾಯಿತರಿಗೆ ಪ್ರತಿಶತ 16% ರಸ್ಟು ಮೀಸಲಾತಿ ನೀಡುವಂತೆ ಮಾಜಿ ಸಚಿವ MB ಪಾಟೀಲ್ ಒತ್ತಾಯಿಸಿದ್ದಾರೆ.ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು 100 ರಿಂದ 200 ಕೋಟಿ ಅನುದಾನವನ್ನು ಒದಗಿಸಿದರೆ ಪ್ರಯೋಜನವಾಗುವುದಿಲ್ಲ ಎಂದು ಶಾಸಕ ಎಂ ಬಿ ಪಾಟೀಲ್ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಕೋರಿದ್ದಾರೆ.ಈ ಕುರಿತಂತೆ ಮುಖ್ಯಮಂತ್ರಿಗೆ ಬಹಿರಂಗ ಪತ್ರವನ್ನು ಬರೆದಿರುವ ಎಮ್ ಬಿ ಪಾಟೀಲ್ ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.16-18 ರಷ್ಟು ಲಿಂಗಾಯತರು ಇದ್ದು, ಅವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯ ಮಾಡಿದ್ದಾರೆ. ಈ ಒಂದು ಮೀಸಲಾತಿ ಬಹು ದಿನಗಳ ಬೇಡಿಕೆಯಾಗಿದೆ. ರಾಜ್ಯದ 6.5ಕೋಟಿ ಜನಸಂಖ್ಯೆಯ ಪೈಕಿ ಲಿಂಗಾಯತರ ಜನಸಂಖ್ಯೆ ಒಂದು ಕೋಟಿಗಿಂತಲೂ ಹೆಚ್ಚಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ, ಆದ್ದರಿಂದ ನೆರೆಯ ಮಹಾರಾಷ್ಟ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕೂಡ ಲಿಂಗಾಯತರಿಗೆ ಶೇ.16 ರಿಂದ18ರಷ್ಟು ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ನೀಡುವ ಮೂಲಕ ಲಿಂಗಾಯತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಪತ್ರದಲ್ಲಿ ಎಂ ಬಿ ಪಾಟೀಲ್ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.
ಕೆಲವರ ಬೇಡಿಕೆಯಂತೆ ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100–200 ಕೋಟಿ ಅನುದಾನ ಒದಗಿಸಿದರೆ, ಹೆಚ್ಚು ಪ್ರಯೋಜನವಾಗುವದಿಲ್ಲ ಇನ್ನೂ ಹೆಚ್ಚು ಅನುದಾನವನ್ನು ನಿಮಗಕ್ಕೇ ನೀಡಿ. ಈ ಅಭಿವೃದ್ಧಿ ಸ್ಥಾಪನೆ ಎಂಬುದು ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಲಿಂಗಾಯತರ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ, ರಾಜ್ಯ ಸರ್ಕಾರ ಶೇ.16-18 ರಷ್ಟು ಮೀಸಲಾತಿಯನ್ನು ಕಲ್ಪಿಸಬೇಕೆಂದು ಪತ್ರದಲ್ಲಿ ಅವರು ಒತ್ತಾಯಿಸಿದ್ದಾರೆ.
ಕೂಡಲೇ ಈ ಒಂದು ನಮ್ಮ ಸಮಾಜದ ಬೇಡಿಕೆಯನ್ನು ಮುಖ್ಯಮಂತ್ರಿ ಗಂಭೀರವಾಗಿ ತಗೆದುಕೊಂಡು ಸಮಸ್ಯೆಯನ್ನು ಪರಿಹರಿಸಬೇಕೆಂದು ಪತ್ರದಲ್ಲಿ ಮಾಜಿ ಸಚಿವ ಮತ್ತು ಸಮಾಜದ ಮುಖಂಡರಾಗಿರುವ ಎಮ್ ಬಿ ಪಾಟೀಲ್ ನಾಡದೋರೆಗೆ ತಮ್ಮ ಒತ್ತಾಯವನ್ನು ಪತ್ರದ ಮೂಲಕ ಆಗ್ರಹಿಸಿದ್ದಾರೆ.