ಬೆಂಗಳೂರು –
ಎಲ್ಲಾ ಗ್ರಾಹಕರು ಅಡುಗೆ ಅನಿಲದ ಸಿಲಿಂಡರ್ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ, ಬಿಲ್ ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಆಹಾರ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಸಂದೇಶ ನೀಡಿದ್ದಾರೆ.ಗ್ಯಾಸ್ ಏಜೆನ್ಸಿ ಗಳು ಗೃಹ ಬಳಿಕೆಯ ಅನಿಲ ಸಿಲಿಂಡರ್ ಅನ್ನು ನೇರವಾಗಿ ಗೋದಾಮಿನಿಂದ ಗ್ರಾಹಕ ರಿಗೆ ಸರಬರಾಜು ಮಾಡತಕ್ಕದ್ದು ಯಾವುದೇ ಕಾರಣಕ್ಕಾಗಿ ಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ,ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕ ದ್ದಲ್ಲ ಎಂಬ ಸೂಚನೆ ನೀಡಿದ್ದಾರೆ.
ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ ಕೂಡಲೇ ದೂರನ್ನು ನೀಡಲು ಸೂಚನೆ ನೀಡಿದ್ದಾರೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾ ರಗಳ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ದೂರ ವಾಣಿ ಸಂಖ್ಯೆ 08532-236178 ಮತ್ತು ತಹಶೀಲ್ದಾರ ಕಚೇರಿಯ ಆಹಾರ ಶಾಖೆಗೆ ದೂರು ಸಲಿಸುವುದು ಎಂದು ಅಧಿಕಾರಿ ಗಳು ತಿಳಿಸಿದ್ದಾರೆ.