ನವದೆಹಲಿ –
ದೇಶದ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ರಾಜೀವ್ ಕುಮಾರ್ ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಆಯ್ಕೆ ಸಮಿತಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ)ನ್ನಾಗಿ ಆಯ್ಕೆ ಮಾಡಿದೆ ಹೌದು ದೇಶದ 26ನೇ ಸಿಇಸಿಯಾಗಿ ಇವರನ್ನು ಕೇಂದ್ರ ಸರಕಾರ ಅಂತಿಮ ಗೊಳಿಸಿದೆ.
ವಿವೇಕ್ ಜೋಶಿಯವರನ್ನು ಚುನಾವಣಾ ಆಯುಕ್ತ ರಾಗಿ ಕೇಂದ್ರ ಸರಕಾರದಿಂದ ನೇಮಕಗೊಂಡಿದ್ದಾರೆ. ಇವರು 1989ರ ಬ್ಯಾಚ್‌ನ ಹರಿಯಾಣ ಕೇಡರ್‌ನ ಐಎಎಸ್ ಅಧಿಕಾರಿ ಯಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಯ್ಕೆ ಸಮಿತಿಯ ಇತರ ಸದಸ್ಯರಾಗಿದ್ದಾರೆ.
ಚುನಾವಣಾ ಆಯುಕ್ತರ ನೇಮಕ ಆಯ್ಕೆ ಪ್ರಕ್ರಿಯೆ ಪ್ರಶ್ನಿಸಿದ ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥ ವಾಗಿಲ್ಲ. ಹೀಗಿರುವಾಗ ಮುಖ್ಯ ಆಯುಕ್ತರ ನೇಮಕಕ್ಕೆ ತರಾತುರಿ ಮಾಡಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಫೆ.21ಕ್ಕೆ ಸುಪ್ರೀಂ ಕೋರ್ಟ್ ಈ ಸಂಬಂಧ ವಿಚಾರಣೆ ನಡೆಸಲಿದೆ. ಹೀಗಾಗಿ, ಸಭೆಯಲ್ಲಿ ನೇಮಕ ವಿರುದ್ಧ ಆಕ್ಷೇಪ ಟಿಪ್ಪಣಿಯನ್ನೂ ರಾಹುಲ್ ಗಾಂಧಿ ಸಲ್ಲಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..