ಬೆಂಗಳೂರು –
ಸೆಕ್ಸ್ ಸಿಡಿ ವಿಚಾರದಲ್ಲಿ ಆರೋಪ ಹೊತ್ತುಕೊಂಡಿದ್ದ ರಮೇಶ್ ಜಾರಕಿಹೊಳಿ ಕೊನೆಗೂ ಪಕ್ಷಕ್ಕೆ ಮುಜುಗರನ್ನು ತಪ್ಪಿಸಲು ಗೋಕಾಕ್ ಸಾಹುಕಾರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನಿನ್ನೇಯಷ್ಟೇ ಸೆಕ್ಸ್ ಸಿಡಿ ಹೊರಬಂದಿತ್ತು.ಈ ಎಲ್ಲಾ ಬೆಳವಣಿಗೆ ನಡುವೆ ಇದೊಂದು ನಕಲಿ ಸಿಡಿ ಸಿಡಿ ಇದಕ್ಕೆ ಯಾಕೇ ನಾನು ಹೆದರಿ ರಾಜೀನಾಮೆ ಕೊಡಬೇಕು ಎಂದಿದ್ದರು. ಇವೆಲ್ಲದರ ನಡುವೆ ನಡೆದ ಬೆಳವಣಿಗೆ ಯಿಂದಾಗಿ ಕೊನೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಪಕ್ಷಕ್ಕೆ ಮುಜುಗರ ತಪ್ಪಿಸಲು ಇಂದು ಸಂಜೆಯೊಳಗೆ ಸಚಿವರ ರಾಜೀನಾಮೆ ಪಡೆಯುವಂತೆ ಹೈಕಮಾಂಡ್ ಸೂಚನೆ ನೀಡಿತ್ತು. ವರಿಷ್ಠರ ಸೂಚನೆಯನ್ನು ಸಚಿವ ಬಸವರಾಜ ಬೊಮ್ಮಾಯಿ ಮೂಲಕ ರಮೇಶ್ ಜಾರಕಿಹೊಳಿಗೆ ಸಿಎಂ ಬಿಎಸ್ ವೈ ತಲುಪಿಸಿದ್ದರು. ಇದಕ್ಕೆ ಸಮ್ಮತಿ ಸೂಚಿಸಿದ ರಮೇಶ್ ಜಾರಕಿಹೊಳಿ, ಸಿಎಂ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಅಲ್ಲದೆ ನಾನು ನಿರ್ದೋಷಿಯಾಗಿ ಬಂದ ಬಳಿಕ ನನಗೆ ಸಚಿವ ಸ್ಥಾನ ಕೊಡಬೇಕು ಹಾಗೂ ಸದ್ಯ ಜಲಸಂಪನ್ಮೂಲ ಖಾತೆಯನ್ನು ನನ್ನ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಕೊಡಬೇಕು ಎಂದು ರಾಜೀನಾಮೆ ಪತ್ರದಲ್ಲಿ ರಮೇಶ್ ಜಾರಕಿಹೊಳಿ ಉಲ್ಲೇಖಿಸಿ ರಾಜೀನಾಮೆ ನೀಡಿದರು.