ಬೆಂಗಳೂರು –
ಹೌದು ರಾಜ್ಯ ಸರ್ಕಾರಿ ನೌಕರ’ರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಂತಾಗಿದ್ದು ಸಾಮಾನ್ಯ ಭವಿಷ್ಯ ನಿಧಿ ಬಡ್ಡಿ ದರ ಶೇ.7.1ಕ್ಕೆ ನಿಗದಿ ಮಾಡಿ ನೌಕರರಿಗೆ ಅನುಕೂಲ ಮಾಡಲಾಗಿದೆ
ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಖಾತೆಯಲ್ಲಿ ಜಮೆಯಾಗುವಂತ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ಶೇ.7.1 ನಿಗದಿ ಪಡಿಸಲಾಗಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಸೂಚನೆಯನ್ನು ಹೊರಡಿಸಿದ್ದಾರೆ.ಆ ಅಧಿಸೂಚನೆಯಲ್ಲಿ ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆ ದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ 01-01-2023 ರಿಂದ 31-03-2023ರವೆರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪಡಿಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಜಿಪಿಎಫ್ ಮೇಲಿನ ಬಡ್ಡಿಯ ದರದಲ್ಲಿ ಜನವರಿ 2023ರಿಂದ ಮಾರ್ಚ್ ವರೆಗೆ ಸರ್ಕಾರಿ ನೌಕರರ ಸಾಮಾನ್ಯ ಭವಿಷ್ಯ ನಿಧಿ ಖಾತೆಗೆ ಹಣ ಜಮೆಯಾಗಲಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..