ಬೆಂಗಳೂರು –
ವರ್ಗಾವಣೆಯ ನೀರಿಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ.ಹೌದು ವರ್ಗಾವಣೆಗಾಗಿ ಕಾಯುತ್ತಿದ್ದ ಶಿಕ್ಷಕರಿಗೆ ಜನೆವರಿ ಯಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ ಸಿ ನಾಗೇಶ್ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಜನವರಿಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಈ ಕುರಿತಂತೆ ಶೀಘ್ರವೇ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದರು.
ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆಯ ತಿದ್ದುಪಡಿ ಯನ್ನು ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಲಾಗುತ್ತದೆ ಮುಂದಿನ ತಿಂಗಳು ಜನವರಿ ಅಂತ್ಯದೊಳಗೆ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದರು
ಇನ್ನೂ ಶಿಕ್ಷಕರ ಸ್ನೇಹಿ ವರ್ಗಾವಣೆ ನಿಯಮ ರೂಪಿಸಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆಗೆ ತಿದ್ದುಪಡಿ ಕರಡು ಅಧಿಸೂಚನೆ ಹೊರಡಿಸಲಾ ಗಿದ್ದು ಆಕ್ಷೇಪಣೆ ಸ್ವೀಕರಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗಿತ್ತು ಈಗ ಜನವರಿ ಅಂತ್ಯ ದೊಳಗೆ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗ್ತಿದೆ ಎಂದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..