ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ CM ಮುಂದಿನ ಆಗಸ್ಟ್ 15 ರ ಒಳಗಾಗಿ ಪ್ರತ್ಯೇಕ ಶೌಚಾಲಯ ನಿರ್ಮಾಣದ ಘೋಷಣೆ

Suddi Sante Desk
ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್  ನ್ಯೂಸ್ ನೀಡಿದ CM ಮುಂದಿನ ಆಗಸ್ಟ್ 15 ರ ಒಳಗಾಗಿ ಪ್ರತ್ಯೇಕ ಶೌಚಾಲಯ ನಿರ್ಮಾಣದ ಘೋಷಣೆ

ಬೆಂಗಳೂರು

ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ ಬಹಳ ಮುಖ್ಯ ವಾಗಿದ್ದು ಬರುವ ಆಗಸ್ಟ್ 15 ರೊಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿ ನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು  ನಿರ್ಮಿಸ ಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಆಯೋಜಿಸಿರುವ  50 ಹಾಸಿಗೆ ಸಾಮಥ್ರ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉಪ ಕೇಂದ್ರ’ದ ಹಾಗೂ  ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಮಕ್ಕಳ ತೀವ್ರ ನಿಗಾ ಘಟಕದ ಉಪಕೇಂದ್ರ’ದ ಉದ್ಘಾಟಿಸಿ ಮಾತನಾಡಿದರು

 

100ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಾಗಿ ಮೇಲ್ದರ್ಜೆಗೇರಿಸುವುದು ತಲಾ 7-8 ಲಕ್ಷ ರೂ.ಗಳ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ದೊರೆಯುವ ಸೌಲಭ್ಯಗಳನ್ನು, ಬೆಡ್ ಗಳನ್ನು ಹೆಚ್ಚಿಸಲಾಗುವುದು. ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಮೊದಲೇ ಇದ್ದ ಸಮುದಾಯ ಆರೋಗ್ಯ ಕೇಂದ್ರ ಗಳನ್ನು ಟೆಲಿಮೆಡಿಸಿನ್ ಗೆ ಜೋಡಣೆ ಮಾಡುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದರು.

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.