ಬೆಂಗಳೂರು –
ರಾಜ್ಯದ ಸರ್ಕಾರಿ ಶಾಲಾ ಮಕ್ಕಳ ಕೈಗೆ ಡಿಜಿಟಲ್ ಹೆಲ್ತ್ ಕಾರ್ಡ್ ಗಳು ಸಿಗಲಿದ್ದು ಈ ಕುರಿತಂತೆ ಈಗಾಗಲೇ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದ್ದು ಈ ಒಂದು ಕಾರ್ಯವೂ ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಶೀಘ್ರವೇ ಡಿಜಿಟಲ್ ಹೆಲ್ತ್ ಕಾರ್ಡ್ ವಿತರಣೆಯೊಂದಿಗೆ ನಡೆಯಲಿದೆ ಎಂದು ದೊರೆ ಸ್ವಾಮಿ ಹೇಳಿದರು.ಬೆಂಗಳೂರಿನಲ್ಲಿ ಮಾತನಾ ಡಿದ ಅವರು ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳ ಆರೋಗ್ಯವನ್ನು ತಪಾಸಿಸಿ ವಾರ್ಷಿಕ ಅಂಕಪಟ್ಟಿ ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಪ್ರೊ.ಎಂ.ಆರ್.ದೊರೆಸ್ವಾಮಿ ಹೇಳಿದರು.
ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಾ ಗಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ವಾರ್ಷಿಕ ಅಂಕಪಟ್ಟಿ ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ನಿರ್ಧರಿಸಲಾಗಿದೆ ಎಂದರು.ರಾಜ್ಯದ 48 ಸಾವಿರ ಶಾಲೆಗಳ ಮಕ್ಕಳ ಸಮಗ್ರ ಆರೋಗ್ಯ ತಪಾಸಣೆ ಒಂದು ಇಲಾಖೆಯಿಂದ ಸಾಧ್ಯವಿಲ್ಲ. ಹೀಗಾಗಿ ಸರ್ಕಾರಿ, ಖಾಸಗಿ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳ ಸಹಭಾಗಿತ್ವದಲ್ಲಿ ನಿರ್ವ ಹಿಸಲು ಕೋರಲಾಗಿದೆ ತಪಾಸಣೆ ಕಾಲಕ್ಕೆ ಕಣ್ಣು ದೋಷ, ಹಲ್ಲು ನೋವು ಮುಂತಾದ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ತಿಳಿಸಲಾಗಿದೆ.ಜೊತೆಗೆ ಪರೀಕ್ಷಾ ಫಲಿತಾಂಶ ಅಂಕ ಪಟ್ಟಿ ಜೊತೆಗೆ ಮಕ್ಕಳಿಗೆ ಹೆಲ್ತ್ ಕಾರ್ಡ್ ವಿತರಿಸಿ ದರೆ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಲು ಅನುಕೂಲವಾಗಲಿದೆ ಎಂದರು.
ಸುದ್ದಿ ಸಂತೆ ನ್ಯೂಸ್…..