ಬೆಂಗಳೂರು –
ರಾಜ್ಯದ ಪೊಲೀಸ್ ಇಲಾಖೆಗೆ ರಾಜ್ಯದ ಸರ್ಕಾರವು ಶುಭ ಸುದ್ದಿಯನ್ನು ನೀಡಿದೆ ಹೌದು ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷ ರೂಪಾಯಿಯಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.ಪೊಲೀಸ್ ಇಲಾಖೆಯ ಫಾಲೋಯರ್ ಹುದ್ದೆಯಿಂದ ಮಹಾನಿರ್ದೇಶಕರು ಮತ್ತು ಆರಕ್ಷಕ ಮಾಹಾ ನಿರೀಕ್ಷಕರು ಹುದ್ದೆಯವರೆಗೆ ವಿಶೇಷ ಗುಂಪು ವಿಮಾ ಮೊತ್ತವನ್ನು 50 ಲಕ್ಷದವರೆಗೆ ಹೆಚ್ಚಿಸಲಾ ಗಿದೆ.ಪ್ರಸಕ್ತ ಚಾಲ್ತಿಯಲ್ಲಿರುವ ವಿಮಾ ಅವಧಿ ಮುಕ್ತಾಯದಿಂದ ನಂತರದ ದಿನಾಂಕದಿಂದ ಜಾರಿಗೆ ಬರುವಂತೆ ಹೆಚ್ಚಿಸಿ ಆದೇಶಿಸಲಾಗಿದೆ.
ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸಿದೆ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯ ನಿರತ ಪೊಲೀಸ್ ಇಲಾಖೆಯ ಉದ್ಯೋಗಿಗಳ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧ ಪಟ್ಟ ಲೆಕ್ಕ ಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..






















