ಬೆಂಗಳೂರು –
ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು 7ನೇ ವೇತನ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರವು ಸಿದ್ದವಾಗಿದ್ದು ವೇತನ ಪರಿಷ್ಕರಣೆ ಸಹಿತ ಹಲವು ಸವಲತ್ತು ಗಳನ್ನು ನೀಡುವ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಿಸಲು ಮುಂದಾಗಿದೆ.
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟ ಗೊಂಡು ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆ ಯಾಗುತ್ತಿದ್ದಂತೆ ಸರಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆಂದು ಮೂಲಗಳು ಹೇಳಿವೆ. ಆದೇಶಗಳನ್ನು ಸಿದ್ದಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಜೂ. 15ಕ್ಕೆ ಮುನ್ನ ಎಲ್ಲಾ ಆದೇಶ ಹೊರಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾವ್ಯದರ್ಶಿ ಎಲ್.ಕೆ. ಅತೀಕ್ ಹೇಳಿದ್ದು ಏನೇನಾಗಲಿದೆ ಎಂಬೊದನ್ನು ಕಾದು ನೋಡಬೇಕಿದೆ.ಈ ಒಂದು ನಿರೀಕ್ಷೆ ಯಲ್ಲಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಇದ್ದಾರೆ.
ಸುದ್ದಿ ಸಂತೆ ನ್ಯೂಸ್