ಬೆಂಗಳೂರು –
ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿದ CM ಗ ಅಭಿನಂದನೆಗಳನ್ನು ಸಲ್ಲಿಸಿದ ಸರ್ಕಾರಿ ನೌಕರರ ಸಂಘಟನೆಯವರು – ಷಡಾಕ್ಷರಿ ಅವರ ನೇತ್ರತ್ವದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರಿಗೆ ಅಭಿನಂದನೆ ಸಲ್ಲಿಕೆ.
ಹೌದು ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘಟನೆಗಳಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು.ಹೌದು ರಾಜ್ಯದ ಸರ್ಕಾರಿ ನೌಕರರು ಪ್ರಮುಖವಾಗಿ ಕೆಲವೊಂದಿಷ್ಟು ಬೇಡಿಕೆಗಳ ಕುರಿತಂತೆ ಹೋರಾಟಕ್ಕೆ ಕರೆ ನೀಡಿದ್ದರು.
ಈ ಒಂದು ಕೂಗಿಗೆ ಸ್ಪಂದಿಸಿ ಕೂಡಲೇ ಪರಿಹಾ ರದ ರೂಪದಲ್ಲಿ ಮಧ್ಯಂತರ ಪರಿಹಾರದ ಆದೇಶ ವನ್ನು ಹೊರಡಿಸಿದ ಮುಖ್ಯಮಂತ್ರಿಯವರಿಗೆ ಮತ್ತು ಸಚಿವ ಸಂಪುಟದ ಸದಸ್ಯರಿಗೆ ಅಭಿನಂದ ನೆಗಳನ್ನು ಸಲ್ಲಿಸಲಾಯಿತು.ಈ ಕೂಡಲೇ ಶೇ 17% ರಷ್ಟು ಮದ್ಯಂತರ ವೇತನ ಹೆಚ್ಚಳ ಮಾಡಿ ಆದೇಶ ಮಾಡಿಸಿದ ಹಾಗೇ ಹಳೆ ಪಿಂಚಣಿ ಯೋಜನೆ ವಿಚಾರ ಕುರಿತಂತೆ ಆದೇಶವನ್ನು ಹೊರಸಿಡಿ ನೆರವಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಸದಸ್ಯ ರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಬೆಂಗಳೂರಿನ ಆರ್ ಟಿ ನಗರದಲ್ಲಿನ ಮುಖ್ಯ ಮಂತ್ರಿ ಯವರ ನಿವಾಸಕ್ಕೆ ತೆರಳಿಸಿದ ರಾಜ್ಯ ಸರ್ಕಾರಿ ನೌಕರರ ಸಂಘಟನೆಗಳ ಮುಖಂಡ ರುಗಳು ಮುಖ್ಯಮಂತ್ರಿಯವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದವರು ಸಿಎಂ ಆರ್ ಟಿ ನಗರದ ನಿವಾಸದ ಬಳಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ,ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ,ನೌಕರರ ಸಂಘದ ಮಾಜಿ ಅಧ್ಯಕ್ಷ ಬೈರಪ್ಪ ಹಾಗೂ ಮತ್ತಿತರರು ಹಾಜರಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……