ರಾಯಚೂರು –
ನೂತನ ಪಿಂಚಣಿ ಯೋಜನೆ ರದ್ದುಪಡಿಸಿ,ನಿಶ್ಚಿತ ಪಿಂಚಣಿ ಮರುಸ್ಥಾಪಿಸಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾ ರಿಗಳು ಹಾಗೂ ಸದಸ್ಯರು ಆಗ್ರಹಿಸಿದರು.ರಾಯಚೂರಿ ನಲ್ಲಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ಆಡಳಿತ ಸುಧಾರಣಾ ಆಯೋಗ-2ರ ನೌಕರ ವಿರೋಧಿ ಶಿಫಾರಸ್ಸುಗಳನ್ನು ತಿರಸ್ಕರಿಸಬೇಕು ಹಾಗೂ ಗುತ್ತಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಮಾನ ವೇತನ ನೀಡಿ,ನೇರ ನೇಮಕಾತಿಯಲ್ಲಿ ಅವರಿಗೆ ನಿಯಮಾನುಸಾರ ಆದ್ಯತೆ ಕಲಿಸಬೇಕು ಎಂದು ಆಗ್ರಹಿಸಿದರು.ಇದರೊಂದಿಗೆ ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ಕೈಬಿಡಬೇಕು.ಬೆಲೆ ಏರಿಕೆ ನಿಯಂತ್ರಿಸ ಬೇಕು ಹಾಗೂ ಕೋಮು ಸಾಮರಸ್ಯ ಕಾಪಾಡಬೇಕು ಎಂದು ಒತ್ತಾಯಿಸಿದರು.ಒಕ್ಕೂಟದ ಜಿಲ್ಲಾಧ್ಯಕ್ಷ ತಾಯಪ್ಪ ಮರ್ಚೆಟಾಳ್,ಪದಾಧಿಕಾರಿಗಳಾದ ಅಮರೇಶಪ್ಪ, ನಾರಾಯಣ,ಮೋಹಿನುದ್ದೀನ್ ಹಾಗೂ ಮಹಿಳಾ ನೌಕರರು ಉಪಸ್ಥಿತರಿದ್ದರು.