This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪುತ್ತಿವೆ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಹುಬ್ಬಳ್ಳಿಯಲ್ಲಿ ನಡೆಯಿತು ಅರ್ಥಪೂರ್ಣ ಕಾರ್ಯಕ್ರಮ ಸಾಕ್ಷಿಯಾದ್ರು ಅಪಾರ ಜನಸ್ತೋಮ…..

WhatsApp Group Join Now
Telegram Group Join Now

ಹುಬ್ಬಳ್ಳಿ

ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪ ಕವಾಗಿ ಫಲಾನುಭವಿಗಳಿಗೆ ತಲುಪುತ್ತಿವೆ
ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಹುಬ್ಬಳ್ಳಿಯಲ್ಲಿ ನಡೆಯಿತು ಅರ್ಥಪೂರ್ಣ ಕಾರ್ಯಕ್ರಮ ಸಾಕ್ಷಿಯಾದ್ರು ಅಪಾರ ಜನಸ್ತೋಮ ಹೌದು

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪ. ಕವಾಗಿ ತಲುಪುತ್ತಿವೆ. ಪ್ರತಿಯೊಬ್ಬರ ಏಳಿಗೆಗೆ ಯೋಜನೆಗಳು ಸಹಕಾರಿಯಾಗಿವೆ. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದೆ.

ಈ ಎಲ್ಲಾ ಯೋಜನೆಗಳು ಜನರ ಮನೆ ಬಾಗಿಲಿಗೆ ಮುಟ್ಟುತ್ತಿವೆ. ಮುಂದಿನ ದಿನಗಳಲ್ಲಿ ರಾಜ್ಯವನ್ನು ಮಾದರಿ ರಾಜ್ಯವಾಗಿಸುವ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಪರ ಯೋಜನೆಗಳನ್ನು ಜಾರಿಗೊಳಿಸ ಲಾಗುವುದು ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಹೇಳಿದರು.

ರೈಲ್ವೆ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ 72- ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಮತ್ತು 73- ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರಗಳ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗ ಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೆ ತಲುಪುತ್ತಿರುವುದಕ್ಕೆ ಸಮಾವೇಶದಲ್ಲಿ ಪಾಲ್ಗೊಂಡಿರುವ ಮಹಿಳೆಯರೇ ಸಾಕ್ಷಿಯಾಗಿ ದ್ದಾರೆ. ಮನಮೋಹನ್ ಸಿಂಗ್ ಸರ್ಕಾರ ಅಧಿಕಾ ರದಲ್ಲಿದ್ದಾಗ ಆಹಾರ ಭದ್ರತೆ ಕಾನೂನು ಜಾರಿ ಮಾಡಿತ್ತು. ಆರ್ ಟಿ ಇ (ರೈಟು ಟು ಎಜುಕೇಶನ್) ಜಾರಿಗೆ ತರಲಾಗಿದೆ.

ನರೇಗಾ ಯೋಜನೆಯಡಿ 27 ಕೋಟಿ ಜನರು ಲಾಭ ಪಡೆದಿದ್ದಾರೆ. ಮೊದಲು ರೂ. 20 ಕೂಲಿ ಸಿಗುತ್ತಿತ್ತು. ಈಗ ರೂ. 320 ಪಡೆಯುತ್ತಿದ್ದಾರೆ. ಪಂಚಾಯತ್ ಮತ್ತು ಲೋಕಸಭೆ ಚುನಾವಣೆ ಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಇಂದಿರಾ ಗಾಂಧಿ ಅವರುಉಳುವವನೇ ಒಡೆಯ ಯೋಜನೆ ಜಾರಿ ಮಾಡಿದರು.

ವಿಧವಾ ವೇತನ, ಗರೀಭಿ ಹಟಾವೋ ಯೋಜನೆ ಜಾರಿಗೆ ತರಲಾಯಿತು. 70 ವರ್ಷದಲ್ಲಿ ದೇಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಸರ್ಕಾರದ ಕಾರ್ಯಕ್ರ ಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ರಚಿಸಿದ ಸಂವಿಧಾನ ಕುರಿತು ಸಂವಿಧಾನ ಜಾಥಾ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯ ಪ್ರಸಾದ ಅವರು ಮಾತನಾಡಿ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿ ಸಿದೆ.

ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿವೆ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸರ್ಕಾರ ಕೆಲಸಗಳನ್ನು ಮಾಡುತ್ತಿದೆ. ಪ್ರತಿಯೊಬ್ಬರಿಗೂ ಸರ್ಕಾರದ ಯೋಜನೆಗಳು ತಲುಪಬೇಕು. ಪಂಚವಾರ್ಷಿಕ ಯೋಜನೆಗಳು ದೇಶದ ಚಿತ್ರಣವನ್ನೇ ಬದಲಾಯಿಸಿವೆ. ಬಡವರು ಆರ್ಥಿಕ ಸಂಕಷ್ಟದಿಂದ ಹೊರ ಬರುತ್ತಿದ್ದಾರೆ ಎಂದರು.

ಸಮಾವೇಶಕ್ಕೆ ಹರಿದು ಬಂದ ಜನಸ್ತೋಮ

ಗ್ಯಾರಂಟಿ ಸಮಾವೇಶಕ್ಕೆ ಜನರು ಸಾಗರೋಪಾದಿ ಯಲ್ಲಿ ಹರಿದು ಬಂದಿದ್ದರು. ಸಮಾರಂಭದಲ್ಲಿ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿ ಗಳು ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಹಾಜ ರಾಗಿದ್ದರು. ಸುಮಾರು 20 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು

ಗಮನ ಸೆಳೆದ ಗ್ಯಾರಂಟಿ ಯೋಜನೆಯ ವಾಹನ

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿಗಳಾದ ಅನ್ನಭಾಗ್ಯ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ ಹಾಗೂ ಶಕ್ತಿ ಯೋಜನೆಯ ಮಾಹಿತಿ ಹೊಂದಿದ ವಾಹನ ಸಾರ್ವಜನಿಕರ ಗಮನ ಸೆಳೆಯಿತು‌. ಈ ವಾಹನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ‌.ಆರ್.ಅಂಬೇಡ್ಕರ್ ಮತ್ತು ಬಸವಣ್ಣ ನವರ ಪ್ರತಿಮೆಗಳನ್ನು ಅಳವಡಿಸಲಾಗಿದೆ.

ಅಲ್ಲದೇ ಸಾರ್ವಜನಿಕರಿಗೆ ಸಂವಿಧಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂವಿಧಾನ ಪೀಠಿಕೆ ಭಾಗವನ್ನು ವಾಹನದಲ್ಲಿ ಕಾಣಬಹುದಾ ಗಿದೆ. ಹಲವು ವಚನಕಾರರ ವಚನಗಳು ಓದಲು ಸಿಗುತ್ತವೆ.

ಇದೇ ಸಂದರ್ಭದಲ್ಲಿ 75 ನೇ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾ ಪ್ರಚಾರ ವಾಹನಕ್ಕೆ ಚಾಲನೆ ನೀಡ ಲಾಯಿತು.ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಸ್ವಾಗತಿಸಿದರು.ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ, ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ನಾಶಿ, ಪಾಲಿಕೆಯ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಗಳು ಭಾಗವಹಿಸಿದ್ದರು.

ವೇದಿಕೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಬಸವಣ್ಣನವರು, ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಒಬವ್ವ, ನೆಹರು ಸೇರಿದಂತೆ ಮಹಾನ ಪುರುಷರ ವೇಷಧಾರಿಗಳು ಎಲ್ಲರ ಗಮನ ಸೆಳೆದರು.

ಸುಕನ್ಯಾ ಸಮೃದ್ಧಿ, ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳು ಹಾಗೂ ಸಾಧಕರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


WhatsApp Group Join Now
Telegram Group Join Now
Suddi Sante Desk