ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ – ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…..

Suddi Sante Desk
ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ – ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…..

ಬೆಂಗಳೂರು

ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ರಾಜ್ಯಾದ್ಯಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ. ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸ ಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಮನಮೋಹನ್ ಸಿಂಗ್ ರವರು ತಮ್ಮ ಶಾಂತ ಸ್ವಭಾವ, ಆಳವಾದ ಜ್ಞಾನ ಮತ್ತು ಅಪ್ರತಿಮ ದೃಷ್ಟಿಕೋನದಿಂದ ದೇಶದ ಆರ್ಥಿಕತೆ ಹಾಗೂ ಆಡಳಿತವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದಿದ್ದರು. ಇದೀಗ ಮನಮೋಹನ್‌ ಸಿಂಗ್ ಅವರು ಇಹಲೋಕ ತ್ಯಜಿಸಿದ್ದಾರೆ. ಇದೇ ಕಾರಣಕ್ಕೆ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.