ಲಿಂಗಸುಗೂರು –
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ಅವರನ್ನು ಸೇವೆಯಿಂದ ಅಮಾನತುಗೊಳಿ ಸಲಾಗಿದೆ. ರಮೇಶ ಜಿ.ರಾಠೋಡ ಸಮೀಕ್ಷಾ ಕಾರ್ಯಕ್ಕೆ ಸಹಕರಿಸುತ್ತಿಲ್ಲ.ಪ್ರಗತಿ ಕುಂಠಿತವಾಗಿದೆ ಎಂದು ತಹಶೀಲ್ದಾರ್ ಸತ್ಯಮ್ಮ ಅವರು ಜಿಲ್ಲಾಧಿಕಾರಿಗೆ ಲಿಖಿತ ದೂರು ನೀಡಿದ್ದರು.
ರಮೇಶ ರಾಠೋಡ ಲೋಕಸಭಾ ಚುನಾವಣೆ ವೇಳೆಯೂ ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ, ಬೇಜವಾಬ್ದಾರಿತನ ತೋರಿದ ಕಾರಣಕ್ಕೆ ಅಮಾನತು ಗೊಂಡಿದ್ದರು ಸಧ್ಯ ಮತ್ತೆ ಅಮಾನತು ಗೊಂಡಿದ್ದು ಮತ್ತೊಮ್ಮೆ ಅಧಿಕಾರಿಯ ಜವಾಬ್ದಾರಿ ಕರ್ತವ್ಯಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.
ಸುದ್ದಿ ಸಂತೆ ನ್ಯೂಸ್ ಲಿಂಗಸೂರು……