ಸರ್ಕಾರಿ ಶಾಲಾ ಶಿಕ್ಷಕ ಆತ್ಮಹತ್ಯೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬಾಳಪ್ಪ ಸರ್‌.‌‌‌‌‌‌….

Suddi Sante Desk

ಬೆಂಗಳೂರು –

ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕು ಬೆಳ್ಳುಬ್ಬಿ ಗ್ರಾಮದಲ್ಲಿ ನಡೆದಿದೆ. ಕೊಲ್ಹಾರದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಬಾಳಪ್ಪ ದಳವಾಯಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರಾಗಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರಂತೆ

ಡೆತ್ ನೋಟ್ ಬರೆದಿಟ್ಟು ಕಾಣೆಯಾಗಿದ್ದ ಶಿಕ್ಷಕ ಬಾಳಪ್ಪ ದಳವಾಯಿ ಕೃಷ್ಣಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಾಳಪ್ಪ ದಳವಾಯಿ ಬರೆದಿಟ್ಟಿರುವ ಡೆತ್ ನೋಟ್ ಪತ್ತೆ ಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಶಿಕ್ಷಕ ವೃಂದಕ್ಕೆ, ಸ್ನೇಹಿತರಿಗೆ ಕೋಟಿ ವಂದನೆಗಳು. ನನಗೆ ಬರುವ ಸೌಲಭ್ಯಗಳನ್ನು ಒದಗಿಸಿಕೊಡಿ ಪತ್ನಿ ಮಕ್ಕಳಿಗೆ ಅನುಕೂಲ ವಾಗಲಿ ಎಂದು ಬರೆದಿದ್ದು ಸಧ್ಯ ಈ ಕುರಿತು ದೂರನ್ನು ದಾಖಲು ಮಾಡಿಕೊಂಡ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.