ಬೆಂಗಳೂರು –
ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು ಈವರೆಗೆ 21,232 ಸರ್ಕಾರಿ ನೌಕರರಿಗೆ ದಂಡ ಹಾಕಲಾ ಗಿದ್ದು ರಾಜ್ಯ ಸರ್ಕಾರವು ಬಿಪಿಎಲ್,ಅಂತ್ಯೋದಯ ಕಾರ್ಡ್ ಗಳ ಪತ್ತೆಗಾಗಿ ಕಂದಾಯ ಇಲಾಖೆಯ ಇ-ಜನ್ಮ ತಂತ್ರಾಂಶ ಬಳಸುತ್ತಿದ್ದು, ಇದರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ಹೊಂದಿದ್ದ 21,232 ಅಕ್ರಮ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚಿದ್ದಾರೆ.
ಸರ್ಕಾರಿ ನೌಕರರು ಬಿಪಿಎಲ್,ಅಂತ್ಯೋದಯ ಅನ್ನ ಯೋಜನೆ ಕಾರ್ಡ್ ಗಳನ್ನು ಪಡೆದುಕೊಂಡಿರುವುದು ಆಹಾರ ಇಲಾಖೆ ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದೆ. ಬಿಪಿಎಲ್,ಅಂತ್ಯೋದಯ ಕಾರ್ಡ್ ಗಳನ್ನು ಪಡೆದುಕೊಂ ಡಿರುವ ಸರ್ಕಾರಿ ನೌಕರರಿಗೆ ನೋಟಿಸ್ ನೀಡಲಾಗಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ 21,232 ನೌಕರರು ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಕ್ರಮ ಕೈಗೊಂಡಿದೆ.ಅಂತಹ ನೌಕರರಿಗೆ 40 ಸಾವಿರ ರೂ.ನಿಂದ 1.50 ಲಕ್ಷ ರೂ.ವರೆಗೆ ದಂಡ ಹಾಕಲಾಗಿದೆ.