ಬಿಸಿಯೂಟ ದಲ್ಲಿ ಮೊಟ್ಟೆ ಬಾಳೆಹಣ್ಣು – ಡಿಸೆಂಬರ್ ತಿಂಗಳಿ ನಿಂದ ವಿತರಣೆ ಆರಂಭ…..

ಬೆಂಗಳೂರು –

ರಾಜ್ಯದ ಶಾಲಾ ಮಕ್ಕಳಲ್ಲಿನ ಅಪೌಷ್ಟಿಕತೆ ಹಿನ್ನೆಲೆಯಲ್ಲಿ ಬಿಸಿಯೂಟ ದಲ್ಲಿ ಮೊಟ್ಟೆ,ಬಾಳೆಹಣ್ಣು ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಡಿಸೆಂಬರ್ ತಿಂಗಳಿನಿಂದ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ,ಬಾಳೆಹಣ್ಣು ವಿತರಿ ಸಲು ನಿರ್ಧಾರ ಮಾಡಲಾಗಿದೆ.ಈ ಕಾರ್ಯಕ್ರಮ ಅನುಷ್ಠಾ ನಕ್ಕೆ ರಾಜ್ಯ ಸರ್ಕಾರ ಇಂದು ಸುತ್ತೋಲೆ ಹೊರಡಿಸಿದೆ. ಪ್ರಾರಂಭದಲ್ಲಿ 7 ಜಿಲ್ಲೆಗಳಲ್ಲಿ ಇದನ್ನು ಆರಂಭ ಮಾಡಲಾ ಗುತ್ತಿದೆ.ಇಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು ಬೀದರ್, ವಿಜಯಪುರ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬಂದಿದೆ. ಇದರಿಂದ ಈ ಸರ್ಕಾರ ನಿರ್ಧಾರ ಕೈಗೊಂಡಿದೆ.

ಕೆಲವು ಜಿಲ್ಲೆಗಳಲ್ಲಿ ಶೇಕಡಾ 70 ಕ್ಕಿಂತಲೂ ಹೆಚ್ಚು ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ.ಅಪೌಷ್ಟಿಕತೆ ಹಿನ್ನೆಲೆ ಮೊಟ್ಟೆ,ಬಾಳೆಹಣ್ಣು ವಿತರಣೆಗೆ ತೀರ್ಮಾನ ಮಾಡಲಾಗಿದೆ.ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 72.3, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್ ಜಿಲ್ಲೆಯಲ್ಲಿ ಶೇಕಡಾ 69.1, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡು ಬಂದಿದೆ.

ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆ ಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ. ಅಪೌಷ್ಟಿಕತೆ ರಕ್ತಹೀನತೆ ಬಳಲುವಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ಮೊಟ್ಟೆ ಬಾಳೆಹಣ್ಣು ವಿತರಿಸಲು ಸರ್ಕಾರದ ನಿರ್ಧಾರ ಕೈಗೊಳ್ಳಲಾಗಿದೆ.6 ರಿಂದ 15ನೇ ವಯೋಮಾನವರೆಗಿನ ಒಟ್ಟು 14,44,322 ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಪ್ರತಿ ಮಾಹೆಗೆ 12 ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸಲು ಸುತ್ತೋಲೆ ಹೊರಡಿಸಿದ್ದು ಒಂದು ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ವಿತರಿಸಲು ಕ್ರಮಕೈಗೊಳ್ಳುವಂತೆ ಸರ್ಕಾರ ತಿಳಿಸಿದೆ.

ರಾಜ್ಯದಲ್ಲಿ ಈಗಾಗಲೇ ಅಂಗನವಾಡಿ ಕೇಂದ್ರಗಳು ಆರಂಭ ಗೊಂಡಿದ್ದು ಪೂರ್ವ ಪ್ರಾಥಮಿಕ ತರಗತಿಗಳು (ಎಲ್‌ಕೆಜಿ- ಯುಕೆಜಿ) ಆರಂಭವಾಗಿವೆ. ಈಗಾಗಲೇ ಕಳೆದ ಆಗಸ್ಟ್‌‌ ನಿಂದ ಹಂತ ಹಂತವಾಗಿ 1ರಿಂದ 12ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಆರಂಭಗೊಂಡಿವೆ ಈಗ ಸರ್ಕಾರದ ಅನುಮತಿಯೊಂದಿಗೆ 18 ತಿಂಗಳ ಬಳಿಕ ಎಲ್‌ಕೆಜಿ ಯುಕೆಜಿ ಅಂಗನವಾಡಿ ಕೇಂದ್ರಗಳು ಶುರುವಾಗಿವೆ.

Leave a Reply

Your email address will not be published. Required fields are marked *

error: Content is protected !!
%d bloggers like this: